ಹೊಸ ವರ್ಷಾಚರಣೆ ಹಿನ್ನೆಲೆ : ಚಾಮುಂಡಿಬೆಟ್ಟ ಪ್ರವೇಶಕ್ಕೆ ನಿರ್ಬಂಧ

chamundeshwari temple
Published on

ಮೈಸೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ. ರಮೇಶ್ ಆದೇಶ ಹೊರಡಿಸಿದ್ದಾರೆ.

ಹೊಸವರ್ಷವನ್ನು ಸ್ವಾಗತಿಸಲು ಸಾಕಷ್ಟು ಜನರು ಡಿ.31ರ ರಾತ್ರಿ ಚಾಮುಂಡಿಬೆಟ್ಟಕ್ಕೆ ತೆರಳುತ್ತಾರೆ. ಕೆಲವರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಾರೆ. ಇದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಚಾಮುಂಡಿಬೆಟ್ಟ ಮೀಸಲು ಅರಣ್ಯ ಪ್ರದೇಶವಾಗಿರು ವ ಹಿನ್ನೆಲೆಯಲ್ಲಿ ಡಿ.31ರ ರಾತ್ರಿ 9 ರಿಂದ ಜ.1ರ ಬೆಳಗ್ಗೆ 5ರವರೆಗೆ ಸಾರ್ವಜನಿಕರು ಹಾಗೂ ವಾಹನಗಳ ಪ್ರವೇಶ ನಿರ್ಬಂಧಿಸ ಲಾಗಿದೆ. ಆದರೆ, ಈ ನಿರ್ಬಂಧ ಚಾಮುಂಡಿ ಬೆಟ್ಟದ ನಿವಾಸಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net