

ಆಲ್ದೂರು: ಪಟ್ಟಣದಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ, ಬೈಕ್ ಸವಾರರಿಗೆ ಬುಧವಾರ ಆಲ್ದೂರು ಪಿಎಸ್ಐ ಹಾಗೂ ಸಿಬ್ಬಂದಿ ದಂಡ ವಿಧಿಸಿ. ದಂಡದ ಹಣದಲ್ಲೇ ಹೊಸ ಹೆಲ್ಮೆಟ್ ಹಾಗೂ ಗುಲಾಬಿ ಹೂ ನೀಡಿ ವಿಭಿನ್ನವಾಗಿ ಜಾಗೃತಿ ಮೂಡಿಸಿದರು.
ಆಲ್ದೂರು ಪಿಎಸ್ಐ ಸಜತ್ ಗೌಡ ಮಾತನಾಡಿ, ಪಟ್ಟಣದಲ್ಲಿ ಇಂದು ಮಧ್ಯಾಹ್ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೆಲ್ಮೆಟ್ ಧರಿಸದ ಬೈಕ್ ಸವಾರರನ್ನು ತಡೆದು 500 ರೂ. ದಂಡ ಹಾಕಿ ಹೊಸ ಹೆಲ್ಮೆಟ್ ನೀಡಿ ಜಾಗೃತಿ ಮೂಡಿಸಲಾಗಿದೆ. ವಾಹನ ಸವಾರರು ಎಲ್ಲಂದರಲ್ಲಿ ವಾಹನಗಳನ್ನು ನಿಲ್ಲಿಸುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಪಟ್ಟಣದ ವೃತ್ತಕ್ಕೆ ಪ್ರತಿ ದಿನ ಸಿಬ್ಬಂದಿ ನಿಯೋಜನೆ ಮಾಡಿದ್ದು, ರ್ಪಾಂಗ್ ವ್ಯವಸ್ಥೆ ಸರಿಯಾದ ಮೇಲೆ ಮುಂದಿನ ದಿನಗಳಲ್ಲಿ ನಾಮಫಲಕಗಳನ್ನು ಅಳವಡಿಸಿರುವ ಜಾಗದಲ್ಲಿ ವಾಹನಗಳನ್ನು ನಿಲ್ಲಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದರು.