

ಸೊರಬ: ಹೊಸ್ತಿಲ ಹುಣ್ಣಿಮೆ ಅಂಗವಾಗಿ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಸ್ಥಾನದಲ್ಲಿ ಗುರುವಾರ ಸಾವಿರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಆಗಮಿಸಿ ಹರಕೆ ತೀರಿಸಿದ ಭಕ್ತರು, ಅಡುಗೆ ಸಿದ್ಧ ಪಡಿಸಿ ಬಂಧುಗಳ ಜತೆ ಸಾಮೂಹಿಕ ಭೋಜನ ಮಾಡಿದರು. ತೊಟ್ಟಿಲು ಬಾವಿಯ ಬಳಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು. ಸೊರಬ, ಹಾನಗಲ್ಲ, ರಾಣೆಬೆನ್ನೂರು, ಹಿರೇಕೆರೂರು, ಬ್ಯಾಡಗಿ, ಶಿಕಾರಿಪುರ, ಹರಿಹರ, ದಾವಣಗೆರೆ, ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.