

ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ಗುರುವಾರ ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದರ ನಾಮಫಲಕಕ್ಕೆ ಗುದ್ದಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಗುರುವಾರ ಬೆಳಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಚಾಲಕ ರಸ್ತೆಯ ಎಡಬದಿಗೆ ಬಸ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ಈ ಅನಾಹುತ ನಡೆದಿದ್ದು, ಈ ವೇಳೆಯಲ್ಲಿ ಹೋಟೆಲ್ ಬಳಿ ಯಾರೂ ನಿಂತಿರದ ಕಾರಣ ಅನಾಹುತ ಸಂಭವಿಸಿಲ್ಲ. ಕೆಲಕಾಲ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು, ಸಾರ್ವಜನಿಕರು, ಪೊಲೀಸರು ಮಧ್ಯಪ್ರವೇಶಿಸಿ ವಾಹನ ಸಂಚಾರ ಸುಗಮಗೊಳಿಸಿದರು.