ಹೋಟೆಲ್‌ಗಳು, ಫಾಸ್ಟ್‌ಫುಡ್‌ಗಳ ಪರಿಶೀಲನೆ: ಕಡಕೊಳ ಪಪಂ ಮುಖ್ಯಾಧಿಕಾರಿ ದಿಢೀರ್ ಭೇಟಿ

mysore
Published on

ಮೈಸೂರು: ಕಡಕೊಳದಲ್ಲಿರುವ ಹೋಟೆಲ್‌ಗಳು, ಬೇಕರಿ, ಫಾಸ್ಟ್‌ಫುಡ್‌ಗಳಿಗೆ ಕಡಕೊಳ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಎಚ್.ಆರ್.ದೀಪಾ ಅವರು ದಿಢೀರ್ ಭೇಟಿ ನೀಡಿ ಸ್ವಚ್ಛತೆ ನಿರ್ವಹಣೆ, ಗ್ರಾಹಕರಿಗೆ ನೀಡುತ್ತಿರುವ ಆಹಾರದ ಗುಣಮಟ್ಟ ಪರಿಶೀಲಿಸಿದರು.

‘ಬೇಸಿಗೆ ಪ್ರಾರಂಭವಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಗ್ರಾಹಕರಿಗೆ ಶುದ್ಧವಾದ ಆಹಾರ, ಬಿಸಿನೀರು ನೀಡುವ ಜತೆಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಂಗಡಿ ಮಾಲೀಕರಿಗೆ ಸೂಚನೆ ನೀಡಿದರು

ಸಸ್ಯಾಹಾರ ಹಾಗೂ ಮಾಂಸಾಹಾರ ಹೋಟೆಲ್‌ಗಳು ಮತ್ತು ಬೇಕರಿಗಳಲ್ಲಿ ಆಹಾರ ತಯಾರಿಸುವವರ ಆರೋಗ್ಯ ತಪಾಸಣೆ ಮಾಡಿಸಿ ಅದರ ಪ್ರಮಾಣ ಪತ್ರವನ್ನು ಹೋಟೆಲ್‌ಗಳಲ್ಲಿ ಇಟ್ಟುಕೊಂಡಿರಬೇಕು ಎಂದು ತಿಳಿಸಿದರು.

ಆಹಾರ ಪದಾರ್ಥಗಳು ಕೆಡದಂತೆ ಮುಂಜಾಗ್ರತಾ ಕ್ರಮ ವಹಿಸಿ ಸಾರ್ವಜನಿಕರಿಗೆ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರದಂತೆ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಅಲ್ಲದೆ ಲೋಪವಾದರೆ ಕಾನೂನು ರೀತಿ ಕ್ರಮ ಕೈಗೊಂಡು ಹೋಟೆಲ್ ಹಾಗೂ ಬೇಕರಿಗಳನ್ನು ಬಂದ್ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಂತರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಹೆದ್ದಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್‌ಗಳಿಗೆ ಭೇಟಿ ನೀಡಿ, ಅಂತಾರಾಜ್ಯ ಮತ್ತು ಅಂತರ ಜಿಲ್ಲೆಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿರುವುದರಿಂದ ಸ್ವಚ್ಛತೆಗೆ ಮತ್ತು ಶುದ್ಧ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಪಪಂ ಆರೋಗ್ಯ ನಿರೀಕ್ಷಕ ಮಂಜುನಾಥ್, ಸ್ವಚ್ಛತಾ ಮೇಲ್ವಿಚಾರಕರಾದ ಆನಂದ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net