

ಕಲಬುರಗಿ: ದಕ್ಷಿಣ ವಲಯದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ನಗರದ ಪೂರ್ಣ ಜ್ಞಾನ ಆಂಗ್ಲ ಮಾಧ್ಯಮ ಶಾಲೆ ಸಾಧನೆ ಮೆರೆದಿದೆ.
7 ಮೀಟರ್ ಉದ್ದ ಜಿಗಿತದಲ್ಲಿ ಏಳನೇ ತರಗತಿ ವಿದ್ಯಾರ್ಥಿ ಗುಂಡೇರಾಯ ಅತ್ಯುತ್ತಮ ಪ್ರದರ್ಶನ ನೀಡಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇನ್ನುಳಿದ ಮಕ್ಕಳು ವಿವಿಧ ಆಟಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ಗಮನಸೆಳೆದಿದ್ದಾರೆ.
ಮಕ್ಕಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಮುಖ್ಯಗುರುಗಳು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ.