

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ನಾವು ಎಲ್ಲ ಕ್ಷೇತ್ರಗಳಿಗೆ ತೀವ್ರ ಪೈಪೋಟಿ ಕಾಣುತ್ತಿದ್ದೇವೆ. ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರ ಹಾಕಲು ಶಿಕ್ಷಕರು ಪ್ರಯತ್ನಿಸಬೇಕು ಎಂದು ಶಾಸಕ ನಾಗನಗೌಡ ಕಂದಕೂರ ಸಲಹೆ ನೀಡಿದರು.
ತಾಲೂಕಿನ ಲಿಂಗೇರಿ ಸ್ಟೇಷನ್ ಪ್ರೌಢಶಾಲಾ ಆವರಣದಲ್ಲಿ ಜಿಪಂ, ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿಯ ಸಹಯೋಗದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾಥರ್ಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಮೊದಲು ನಾವು ವಿದ್ಯಾಥರ್ಿಗಳಲ್ಲಿ ಶಿಸ್ತು, ಸಂಸ್ಕಾರ, ಸಮಯ ಪ್ರಜ್ಞೆ ಮೂಡಿಸುವ ಜತೆಗೆ ಅವರ ದೈನಂದಿನ ಪಠ್ಯ-ಪುಸ್ತಕಗಳ ಅಭ್ಯಾಸದ ಜತೆಗೆ ಕ್ರೀಡಾ ಚಟುವಟಿಕೆಗಳ ಬಗ್ಗೆಯೂ ಆಸಕ್ತಿ ಮೂಡಿಸಬೇಕು. ಅಂದಾಗ ಮಾತ್ರ ಅವರು ದೈಹಿಕ, ಮಾನಸಿಕ ಹಾಗೂ ಆರೋಗ್ಯದಿಂದ ಕ್ರೀಯಾಶೀಲರಾಗುತ್ತಾರೆ ಎಂದರು.
ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳಿಗೆ ತಪ್ಪದೆ ಶಿಕ್ಷಣ ಕೋಡಿಸಬೇಕು. ಶಿಕ್ಷಣದಿಂದ ಮಾತ್ರ ನಾವು ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಈ ಹಿಂದೆ ನಾನು ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷನಾಗಿದ್ದಾಗ ಕ್ಷೇತ್ರದ ಗಡಿ ಭಾಗದ ಹಳ್ಳಿಗಳ ಜನತೆಗೆ ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಕಲ್ಪಿಸುವ ಕೆಲಸ ಮಾಡಿದ್ದೆ ಎಂದು ಹೇಳಿದರು