ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

hnp 1
ಹೊಳೆನರಸೀಪುರ ಹೇಮಾವತಿ ಕ್ರೀಡಾಂಗಣದಲ್ಲಿ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಗಣ್ಯರು ಚಾಲನೆ ನೀಡಿದರು. ಯತೀಶ್, ದೌಲತ್‌ರಾವ್, ಕಾಂತರಾಜು, ಪಿ.ರಾಜು, ಶಿವಣ್ಣ ಇತರರು ಇದ್ದರು.
Published on

ಹೊಳೆನರಸೀಪುರ: ವಿದ್ಯಾರ್ಥಿಗಳು ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯತೀಶ್ ತಿಳಿಸಿದರು.

ಪಟ್ಟಣದ ಹೇಮಾವತಿ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಿಂದ ಮಕ್ಕಳು ದೈಹಿಕ ಹಾಗೂ ಮಾನಸಿಕ ಸದೃಢವಾಗಬಹುದು ಎಂದು ಹೇಳಿದರು. ಮುಖ್ಯ ಶಿಕ್ಷಕ ದೌಲತ್‌ರಾವ್, ಶಿಕ್ಷಕರಾದ ಕಾಂತರಾಜು, ಪಿ.ರಾಜು, ಶಿವಣ್ಣ, ವಿಶ್ವನಾಥ್, ಮಂಜುನಾಥ್, ಸುರೇಶ್‌ನಾಯಕ್, ಚಂದ್ರಕಲಾ, ಪುಟ್ಟಣ್ಣಯ್ಯ, ನಾಗರತ್ನಾ, ಪುಷ್ಪಲತಾ, ಸೌಮ್ಯಾ, ನಾಗರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net