ಹೋರಾಟ ಹತ್ತಿಕ್ಕಲು ಹಿಟ್ಲರ್ ಮಾದರಿ ಅನುಸರಣೆ

IMG_20241212_113531
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Published on

*ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಆರೋಪ

*ರಾಜ್ಯ ಸರ್ಕಾರದ ವಿರುದ್ಧ ಮುಖಂಡರ ಆಕ್ರೋಶ

ಚಾಮರಾಜನಗರ: ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ನಡೆಸುವ ಮೂಲಕ ರಾಜ್ಯ ಸರ್ಕಾರ ಹೋರಾಟಗಾರರನ್ನು ಹತ್ತಿಕ್ಕಲು ಹಿಟ್ಲರ್ ಮಾದರಿಯನ್ನು ಅನುಸರಿಸುತ್ತಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಆರೋಪಿಸಿದರು.

ರಾಜ್ಯದಲ್ಲಿರುವ ಲಿಂಗಾಯತ ಸಮುದಾಯದವರು ತೀರಾ ಹಿಂದುಳಿದಿದ್ದು, ಕಳೆದ 12 ವರ್ಷಗಳಿಂದ ಲಿಂಗಾಯತರಿಗೆ 2ಎ ಮೀಸಲಾತಿ ನೀಡುವಂತೆ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಬೆಳಗಾವಿಯ ಸುವರ್ಣಸೌಧದ ಮುಂಭಾಗ ಶ್ರೀಬಸವಜಯ ಮೃತ್ಯುಂಜಯಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಲಿಂಗಾಯತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸುವ ಮೂಲಕ ರಾಜ್ಯಸರ್ಕಾರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ದೂರಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೀಸಲಾತಿ ಕೇಳುವುದು ನಮ್ಮ ಹಕ್ಕಾಗಿದೆ. ಆದರೇ ರಾಜ್ಯ ಸರ್ಕಾರ ಲಿಂಗಾಯತ ಸಮುದಾಯವನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಂಡಿದೆ. ಸ್ವಾಮೀಜಿಗಳನ್ನು ಹಾಗೂ ಹಲವಾರು ಹೋರಾಟಗಾರರನ್ನು ಬಂಧನ ಮಾಡುವ ಮೂಲಕ ದೌರ್ಜನ್ಯ ಎಸಗಿದೆ. ಈ ನಿಟ್ಟಿನಲ್ಲಿ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು. ಇಲ್ಲವಾದರೇ ರಾಜ್ಯಾದ್ಯಂತ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ಕರೆನೀಡಿದರು.

ಮಹಾಸಭಾ ಕೇಂದ್ರ ಸಮಿತಿಯ ಸದಸ್ಯ ಎನ್‌ರಿಚ್ ಮಹದೇವಸ್ವಾಮಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಹೋರಾಟಗಾರರ ಮೇಲೆ ಗೂಂಡಾವರ್ತನೆ ಅನುಸರಿಸಿದೆ. ದೇಶದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನೀಡಿದ ಲಿಂಗಾಯತರು ಎಂದಿಗೂ ಕಲ್ಲು ಹೊಡೆಯುವ ಕೃತ್ಯವನ್ನು ಮಾಡುವುದಿಲ್ಲ. ಆದರೇ ಇದು ಸರ್ಕಾರದ ಪೂರ್ವಯೋಜಿತ ಕೃತ್ಯವಾಗಿದ್ದು, ಹೋರಾಟಗಾರರನ್ನು ಹತ್ತಿಕ್ಕುವ ತಂತ್ರವಾಗಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಅಡಿಯಲ್ಲಿ ನಾವೆಲ್ಲರೂ ಸಮಾನರು ಎಂದು ಹೇಳಿದೆ. ಆದರೇ ರಾಜ್ಯ ಸರ್ಕಾರ ಹೋರಾಟಗಾರರ ಮೇಲೆ ದೌರ್ಜನ್ಯ ನಡೆಸುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಈ ಕೂಡಲೇ ಸ್ವಾಮೀಜಿಯ ಕ್ಷಮೆ ಕೇಳಬೇಕು, ಬಂಧನ ಮಾಡಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಮಂಜೇಶ್, ಉಪಾಧ್ಯಕ್ಷ ಇಂದ್ರೇಶ್, ಖಜಾಂಚಿ ಗುರುಸ್ವಾಮಿ, ತಾಲೂಕು ಅಧ್ಯಕ್ಷ ಬಾಲಚಂದ್ರ ಮೂರ್ತಿ, ಜಿ.ಎಂ.ಮಹದೇವಸ್ವಾಮಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net