ಹೋರಾಟಗಾರ ಮಂಟೇಲಿಂಗಯ್ಯ ನಿಧನ

Mantelingahaia (nidna)
Published on

ಮೈಸೂರು: ಹೋರಾಟಗಾರ, ಅಂಬೇಡ್ಕರ್‌ವಾದಿ ಮಂಟೇಲಿಂಗಯ್ಯ (75) ಹೃದಯಾಘಾತದಿಂದ ಸೋಮವಾರ ನಿಧನರಾದರು.
ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಸುಸ್ತು, ಎದೆನೋವು ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲೇ ನಿಧನರಾದರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅಂತಿಮ ದರ್ಶನ ಪಡೆದರು.
ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ಮಂಟೇಲಿಂಗಯ್ಯ ನಗರದ ಕೆಸರೆಯಲ್ಲಿ ವಾಸವಾಗಿದ್ದರು. ಪತ್ನಿ, ಮೂವರು ಪುತ್ರಿಯರು ಇದ್ದಾರೆ. ಕೆಸರೆಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಂಗಳವಾರ ಮಧ್ಯಾಹ್ನ ಗಾಂಧಿನಗರದ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಎಜೆಎಂಎಸ್ ಸಂಘಟನೆ ಮೂಲಕ ಅನೇಕ ಜನಪರ ಚಳವಳಿ ನಡೆಸಿದ್ದರು. ಮೈಸೂರು ದಸರಾಕ್ಕೆ ಪ್ರತಿಯಾಗಿ ಬಡವರ ದಸರಾ ಆಚರಿಸಿದ್ದ ಅವರು, ಆರಂಭದ ದಿನಗಳಲ್ಲಿ ಬಹುಜನ ಸಮಾಜ ಪಕ್ಷದಲ್ಲಿ ತೊಡಗಿಸಿಕೊಂಡಿದ್ದರು. ಗಂಗಮ್ಮ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗೆ ಬಿಡುಗಡೆಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net