

ಭಾಲ್ಕಿ: ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವ ಕಾರ್ಯವಾಗಬೇಕು ಎಂದು ಬಿಕೆಐಟಿ ಉಪನ್ಯಾಸಕ ಪ್ರೊ.ಬಸವರಾಜ ಕಾವಡಿ ಹೇಳಿದರು.
ಪಟ್ಟಣದ ಪುರಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮಂಡಿಸಿದ ಅವರು, ಭಾರತ ದೇಶ ಸ್ವಾತಂತ್ರ್ಯದ ಸವಿಯಲ್ಲಿದ್ದರೂ ಕಲ್ಯಾಣ ಕರ್ನಾಟಕ ಭಾಗ ನಿಜಾಮನ ಆಡಳಿತದ ಕಪಿಮುಷ್ಠಿಯಲ್ಲಿ ನಲುಗುತ್ತಿತ್ತು. ಇಂತಹ ಸಂದರ್ಭದಲ್ಲಿ ಹೋರಾಡಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವ ಅಗತ್ಯತೆ ಇದೆ ಎಂದು ಹೇಳಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಪ್ರಾಸ್ತಾವಿಕ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಶಶಿಕಲಾ ಅಶೋಕ ಸಿಂದನಕೆರೆ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಉಪ ತಹಸೀಲ್ದಾರ್ ಪಲ್ಲವಿ ಬೆಳಕೆರೆ, ಸಿಪಿಐ ಬಿ.ಅಮರೇಶ, ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಕಾರಬಾರಿ, ಎಪಿಎಂಸಿ ಅಧಿಕಾರಿ ರವೀಂದ್ರನಾಥ, ಕಸಾಪ ತಾಲೂಕು ಅಧ್ಯಕ್ಷ ನಾಗಭೂಷಣ ಮಾಮಡಿ, ಸರ್ದಾರ್ ಪಟೇಲ್ ಸಮನ್ವಯ ಸಮಿತಿ ಅಧ್ಯಕ್ಷ ಓಂಪ್ರಕಾಶ ರೊಟ್ಟೆ, ಕೃಷಿ ಅಧಿಕಾರಿ ಮಲ್ಲಿಕಾರ್ಜುನ ಪಿ., ಮಲ್ಲಿನಾಥ ಸಜ್ಜನ್, ಮಲ್ಲಿಕಾರ್ಜುನ ಕನಾಳೆ, ತೋಟಗಾರಿಗೆ ಅಧಿಕಾರಿ ಮಾರುತಿ ಜಬನೂರ, ಸೋಮನಾಥಪ್ಪ ಅಸ್ಟೂರೆ, ಕಾಶಿನಾಥ ಲದ್ದೆ, ಕಾಶಿನಾಥ ಭೂರೆ, ಗುಂಡಪ್ಪ ಸಂಗಮಕರ, ಸುಭಾಷ ಹುಲಸೂರೆ, ಪ್ರಕಾಶ ಭಾವಿಕಟ್ಟಿ ಇದ್ದರು.
ಮಲ್ಲಿಕಾರ್ಜುನ ವಡ್ಡನಕೆರೆ ಸ್ವಾಗತಿಸಿದರು. ದೀಪಕ ಥಮಕೆ ನಿರೂಪಣೆ ಮಾಡಿದರು. ಚನ್ನಪ್ಪ ಜಿ.ಹಳ್ಳದ್ ವಂದಿಸಿದರು. ಕ.ಕ.ವಿಮೋಚನೆಗಾಗಿ ಹೋರಾಡಿದ ಸ್ವಾತಂತ್ರ್ಯಯೋಧರ ಕುಟುಂಬಸ್ಥರನ್ನು ಸನ್ಮಾನಿಸಿ ಗೌರವಿಸಲಾಯಿತು.