

ಚಿತ್ರದುರ್ಗ: ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯಗಳ ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾವಳಿಗೆ ನಗರದ ಎಸ್‌ಆರ್‌ಎಸ್ ಕಾಲೇಜು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಎನ್.ಟಿ. ಉಷಾ ಆಯ್ಕೆಯಾಗಿದ್ದಾರೆ. ಮಾ.3 ರಿಂದ 7ರವರೆಗೆ ಸೇಲಂನ ಪೆರಿಯಾರ್ ವಿವಿಯ ಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಉಷಾ ಭಾಗವಹಿಸುತ್ತಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಎಸ್‌ಆರ್‌ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿ ಡಾ.ಟಿ.ಎಸ್. ರವಿ, ಪ್ರಾಚಾರ್ಯ ಪ್ರೊ.ಜಿ.ಪಿ. ನಂದನ್ ಹರ್ಷ ವ್ಯಕ್ತಪಡಿಸಿದ್ದಾರೆ.