

ನಿಪ್ಪಾಣಿ: ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಅವರ ಪ್ರಯತ್ನದಿಂದ ವಿಎಸ್‌ಎಂ ಬಾಲಕಿಯರ ಪ್ರೌಢಶಾಲೆ ಕೊಠಡಿ ನಿರ್ಮಾಣಕ್ಕೆ ೧೨.೫೦ ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದು ವಿದ್ಯಾ ಸಂವರ್ಧಕ ಮಂಡಳದ ನಿರ್ದೇಶಕ ಆನಂದ ಗಿಂಡೆ ಹೇಳಿದರು.
ತಾಲೂಕಿನ ಯಕ್ಸಂಬಾ ಕಚೇರಿಯಲ್ಲಿ ಪ್ರಕಾಶ ಹುಕ್ಕೇರಿ ಅವರಿಂದ ಈಚೆಗೆ ಅನುದಾನದ ಆದೇಶ ಪ್ರತಿ ಸ್ವೀಕರಿಸಿ ಮಾತನಾಡಿ, ಅನುದಾನ ಮಂಜೂರಿನಿಂದ ಬಾಲಕಿಯರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ ಎಂದರು.
ಪ್ರಕಾಶ ಹುಕ್ಕೇರಿ ಮಾತನಾಡಿದರು.
ಮಂಡಳದ ನಿರ್ದೇಶಕ ಸಂಜಯ ಮೊಳವಾಡೆ, ರಾವಸಾಹೇಬ ಪಾಟೀಲ, ಸಚಿನ ಹಾಲಪ್ಪನವರ, ಸಿಇಒ ಡಾ. ಸಿದ್ದಗೌಡ ಪಾಟೀಲ, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಚಿಕ್ಕೋಡಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆದಂಅಲಿ ಪೀರಜಾದೆ, ಬಾಲಕಿಯರ ಪ್ರೌಢಶಾಲೆ ಮುಖ್ಯಶಿಕ್ಷಕ ಗಜಾನನ ಕಮತೆ ಇತರರಿದ್ದರು.