೨ ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನವೀಕರಣ

2 ckm 3
ಚಿಕ್ಕಮಗಳೂರಿನ ಅಂಬೇಡ್ಕರ್ ಭವನದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಅಧ್ಯಕ್ಷತೆಯಲ್ಲಿ ಅಂಬೇಡ್ಕರ್ ಭವನ ನವೀಕರಣಕ್ಕೆ ಸಂಬAಧಿಸಿದAತೆ ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆಯಿತು. ಹಿರೇಮಗಳೂರು ರಾಮಚಂದ್ರ, ಕೆ.ಟಿ.ರಾಧಾಕೃಷ್ಣ, ಅನಿಲ್ ಕುಮಾರ್, ಪೂರ್ಣಿಮಾ, ಬಿ.ಸಿ.ಬಸವರಾಜ್, ಪೂರ್ಣಿಮಾ, ರೇವಣ್ಣ, ಅಶ್ವಿನಿ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ನವೀಕರಣಗೊಳಿಸಲಾಗುವುದು ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಅಂಬೇಡ್ಕರ್ ಭವನ ನವೀಕರಣಕ್ಕೆ ಸಂಬAಧಿಸಿದAತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ನಗರದ ಹೃದಯ ಭಾಗದಲ್ಲಿರುವ ಅಂಬೇಡ್ಕರ್ ಭವನ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ೨ ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಶೋಷಿತ ವರ್ಗದ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿ ಚರ್ಚಿಸಲಾಗಿದ್ದು, ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಂಬೇಡ್ಕರ್ ಭವನ ನಿರ್ವಹಣೆ ಮತ್ತು ಅನುದಾನವನ್ನು ಸದ್ಭಳಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.

ಸುಸಜ್ಜಿತ ಶೌಚಗೃಹ, ಸ್ವಚ್ಛತೆ, ಅಡುಗೆ ಮನೆ, ಸಿಸಿ ಟಿವಿ ಮುಂತಾದವುಗಳನ್ನು ಅಳವಡಿಸಲಾಗುವುದು. ನಗರದ ಹೊರಭಾಗದಲ್ಲಿ ೫-೧೦ ಎಕರೆ ಜಾಗವನ್ನು ಜಿಲ್ಲಾಡಳಿತ ಗುರುತಿಸಿದ್ದು, ಸದ್ಯದಲ್ಲೇ ಜಿಲ್ಲಾಮಟ್ಟದ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಥವಾ ಬುದ್ಧ ವಿಹಾರ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ವಕೀಲ ಅನಿಲ್‌ಕುಮಾರ್ ಮಾತನಾಡಿ, ಈ ಅಂಬೇಡ್ಕರ್ ಭವನವನ್ನು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಿ ಬಡವರ ಅನುಕೂಲಕ್ಕೆ ಸದ್ಭಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಮಾತನಾಡಿ, ನಗರದ ಅಂಬೇಡ್ಕರ್ ಭವನ ತುಂಬಾ ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ಅನೇಕ ವರ್ಷಗಳ ಹೋರಾಟ ಇಂದು ಫಲಿಸಿದೆ. ಶಾಸಕ ಎಚ್.ಡಿ. ತಮ್ಮಯ್ಯ ಅವರ ಪರಿಶ್ರಮದ ಫಲವಾಗಿ ರಾಜ್ಯಸರ್ಕಾರದಿಂದ ೨ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಇಂದು ನಡೆದ ಸಭೆಯಲ್ಲಿ ಸೂಕ್ತ ಸಲಹೆಗಳನ್ನು ನೀಡಲಾಗಿದ್ದು, ಶೋಷಿತ ಸಮುದಾಯಕ್ಕೆ ಈ ಭವನ ಮುಂದೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಭವನ ನವೀಕರಣಗೊಳ್ಳುತ್ತಿರುವುದು ಶೋಷಿತರು, ಬಡವರು, ಅಂಬೇಡ್ಕರ್ ಅನುಯಾಯಿಗಳು ಹಾಗೂ ಎಲ್ಲಾ ವರ್ಗದ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸಿದ ಅವರು, ಶಾಸಕರ ಮುಂದಿನ ಜೀವನ ಉಜ್ವಲವಾಗಿ ಬೆಳೆಯಲಿ, ರಾಜಕೀಯವಾಗಿ ಪ್ರಜ್ವಲಿಸಲಿ ಎಂದು ಶುಭಹಾರೈಸಿದರು.

ಸಭೆಯಲ್ಲಿ ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಪೂರ್ಣಿಮಾ, ರೇವಣ್ಣ, ಕ್ರೆಡಿಲ್ ಅಧಿಕಾರಿ ಅಶ್ವಿನಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net