

ಬಾಗಲಕೋಟೆ: ಜಿಲ್ಲೆಯಲ್ಲಿ ಮೇ ೨೩ ರಿಂದ ಜೂ.೩ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು ೮ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು ೧೪೬೬೮ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಬೇಕು. ಕೊಠಡಿ ಮೇಲ್ವಿಚಾರಕರನ್ನು ಲಾಟರಿ ಮೂಲಕ ಸಹ ಮುಖ್ಯ ಅಽÃಕ್ಷಕರ ಸಮ್ಮುಖದಲ್ಲಿ ಆಯ್ಕೆ ಮಾಡಲು ಜಿಲ್ಲಾಽಕಾರಿ ಪಿ.ಸುನೀಲಕುಮಾರ ತಿಳಿಸಿದರು.
ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಚಟುವಟಿಕೆ ನಡೆಯದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಽÃಕ್ಷಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಗುರುತಿನ ಚೀಟಿ ನೀಡಿ ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಬಳಸಲು ಕ್ರಮವಹಿಸಬೇಕು. ಜಿಲ್ಲಾ ಮಟ್ಟದಲ್ಲಿ ಒಂದು ಜಾಗೃತ ದಳವನ್ನು ನೇಮಿಸಲಾಗಿದ್ದು, ಪರೀಕ್ಷಾ ಕಾರ್ಯನಿರತ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಲ್ಯಾಪಟಾಪ್, ಇ-ಕ್ಯಾಮರಾ ಇತ್ಯಾದಿ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಽಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮಾಧ್ಯಮದವರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಪರೀಕ್ಷಾ ಸಿದ್ದತೆ ಕುರಿತು ವಿವರವಾಗಿ ಸಭೆಗೆ ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಽಕಾರಿ ರಮೇಶ ಕಳಸದ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಪರೀಕ್ಷಾ ಮುಖ್ಯ ಅಽÃಕ್ಷಕರು, ವೀಕ್ಷಕರು ಉಪಸ್ಥಿತರಿದ್ದರು.