

ಅಥಣಿ: ಗಚ್ಚಿನಮಠದಲ್ಲಿ ಮಹಾತಪಸ್ವಿ ಮುರುಘೇಂದ್ರ ಶಿವಯೋಗಿಗಳ ೧೯೦ನೇ ಜಯಂತ್ಯುತ್ಸವ ಕಾರ್ಯಕ್ರಮ ಜೂ. ೨೬ರಂದು ಜರುಗಲಿದೆ.
ಬೆಳಗ್ಗೆ ೮ ಗಂಟೆಗೆ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ಮಂಗಳಾರತಿ, ಪ್ರಾರ್ಥನೆ, ನಂತರ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ನಡೆಯಲಿದೆ. ಮಧ್ಯಾಹ್ನ ಮಹಾಪ್ರಸಾದ ಏರ್ಪಡಿಸಲಾಗಿದೆ. ಸಂಜೆ ೬ ಗಂಟೆಗೆ ಧರ್ಮಸಭೆ ನಡೆಯಲಿದ್ದು, ಗಚ್ಚಿನಮಠದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಕೊಡೆಕಲ್ ವಿರಕ್ತಮಠದ ಶಿವಕುಮಾರ ಸ್ವಾಮೀಜಿ, ಚಬನೂರ ಹಿರೇಮಠದ ರಾಮಲಿಂಗಯ್ಯ ಸ್ವಾಮೀಜಿ, ಯುವ ಮುಖಂಡ ಚಿದಾನಂದ ಸವದಿ, ಡಾ.ರಾಮ ಕುಲಕರ್ಣಿ, ಗಿರೀಶ ಬುಟಾಳೆ, ಶಶಿಕಾಂತ ಪಟ್ಟಣದ ಆಗಮಿಸುವರು. ಡಾ.ಪ್ರಿಯಂವದಾ ಹುಲಗಬಾಳಿ ರಚಿಸಿದ ಕನ್ನಡ ಸಾಹಿತ್ಯದಲ್ಲಿ ಅಕ್ಕಮಹಾದೇವಿ ಗ್ರಂಥ ಬಿಡುಗಡೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.