ಅಣ್ಣಿಗೇರಿ ಪುರಸಭೆ ಕಟ್ಟಡಕ್ಕೆ ₹ 7.5 ಕೋಟಿ

7.5 crore for Annigeri Municipal Building
Published on

ಅಣ್ಣಿಗೇರಿ: ಪಟ್ಟಣದ ಪುರಸಭೆ ನೂತನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರ್ಕಾರ 7.5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.

ಪಟ್ಟಣದ ಪುರಸಭೆ ಸಭಾಭವನದಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಅನುದಾನ ಬಿಡುಗಡೆ ಆದೇಶ ಪ್ರತಿಯನ್ನು ಎಲ್ಲ ಸದಸ್ಯರಿಗೂ ನೀಡಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಶಾಸಕ ಕೋನರಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿದರು.

ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಯಿತು. ಅಧ್ಯಕ್ಷ ಶಿವಾನಂದ ಬೆಳಹಾರ, ಉಪಾಧ್ಯಕ್ಷ ನಾಗಪ್ಪ ದಳವಾಯಿ, ಸ್ಥಾಯಿ ಸಮಿತಿ ಅಧ್ಯಕ್ಷ ರೈಮಾನಸಾಬ್ ಹೊರಗಿನಮನಿ, ತಹಸೀಲ್ದಾರ್ ಮಂಜುನಾಥ ದಾಸಪ್ಪನವರ, ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಸದಸ್ಯರು ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ಪಟ್ಟಣದ ಅಂಬಿಗೇರಿ ಕ್ರಾಸ್‌ದಿಂದ ಬಸ್ ನಿಲ್ದಾಣದವರೆಗಿನ ರಸ್ತೆ ಮಧ್ಯದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net