ಬಿಡದಿ: ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಸುಮಾರು 19 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ಬುಧವಾರ ಭೂಮಿಪೂಜೆ ನೆರವೇರಿಸಿದರು.
7 ಕೋಟಿ ರೂ. ವೆಚ್ಚದಲ್ಲಿ ಬಿ.ಎಂ.ರಸ್ತೆಯಿಂದ ಶ್ಯಾನುಮಂಗಲ ಮಾರ್ಗವಾಗಿ ಕನಕಪುರ ಗಡಿ ಸೇರುವ 4 ಕಿ.ಮೀ ರಸ್ತೆ, 2 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಕುಂಟನಹಳ್ಳಿ ಕ್ರಾಸ್‌ನಿಂದ ಪರಸನಪಾಳ್ಯ-ಬೈಚೋಹಳ್ಳಿ ಮುಖಾಂತರ ಬೆಂಗಳೂರು ದಕ್ಷಿಣ ಜಿಲ್ಲೆ ಸೇರುವ ರಸ್ತೆಗೆ 0.4 ಕಿ.ಮೀಗೆ ಅಡ್ಡಲಾಗಿ ಸೇತುವೆ ನಿರ್ಮಾಣ, ಹಾಗೂ 10 ಕೋಟಿ ರೂ.ವೆಚ್ಚದ ಕನಕಪುರ ಸೇರುವ 4ರಿಂದ 10 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಈ ವೇಳೆ ಗ್ರಾಮಸ್ಥರುಗಳು ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ ಸಲ್ಲಿಸಿದರು. ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳಿಗೆ ಸ್ಥಳದಲ್ಲಿದ್ದ ಅಧಿಕಾರಿಗಳ ಮೂಲಕ ಬಗೆಹರಿಸಿ, ಉಳಿದ ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಶಾಸಕರು ಭರವಸೆ ನೀಡಿದರು.
ಸದಸ್ಯರಾದ ವೇಣುಗೋಪಾಲ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಯು.ನರಸಿಂಹಯ್ಯ, ತಾಪಂ ಮಾಜಿ ಅಧ್ಯಕ್ಷ ಜಯಚಂದ್ರ, ಮುಖಂಡರಾದ ಸಂಪತ್ ಕುಮಾರ್, ನರಸಿಂಹಯ್ಯ, ಶೇಷಗಿರಿಹಳ್ಳಿ ಶಿವಣ್ಣ ಹಾಗೂ ಇತರರಿದ್ದರು.