

ಪಡುಬಿದ್ರಿ: ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಯೋಜನಾಧಿಕಾರಿ ಮಮತಾ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ಮುದರಂಗಡಿ ವಲಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮುದರಂಗಡಿ ಸಹಯೋಗದಲ್ಲಿ ವಿದ್ಯಾನಗರ ದುರ್ಗಾಮಂದಿರ ಸಭಾ ಭವನದಲ್ಲಿ ಆರೋಗ್ಯ ತಪಾಸಣೆ ಶಿಬಿರ ಮತ್ತು ಲಾಭಾಂಶ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾರ್ಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ ಪ್ರಭು ಆರೋಗ್ಯ ಮಾಹಿತಿ ನೀಡಿದರು. ವಲಯ ಅಧ್ಯಕ್ಷೆ ಸುಮತಿ ಮಂಚಕಲ್ಲು ಅಧ್ಯಕ್ಷತೆ ವಹಿಸಿದ್ದರು.
ಮುದರಂಗಡಿ ಹಾಲು ಉತ್ಪಾದಕ ಸಂಘ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮುದರಂಗಡಿ ಗ್ರಾಪಂ ಉಪಾಧ್ಯಕ್ಷೆ ಮೋಹಿನಿ ಹೆಗ್ಡೆ, ದುರ್ಗಾ ಮಂದಿರದ ಅಧ್ಯಕ್ಷ ಸುಂದರ್ ಮೂಲ್ಯ, ಅರ್ಚಕ ಶ್ರೀಧರ ಆಚಾರ್ಯ, ಸೇವಾ ಪ್ರತಿನಿಧಿ ಶಕುಂತಲಾ, ಜೋಶ್ನ ತಂಡದ ಸದಸ್ಯರು ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ದೇವೇಂದ್ರ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಕಾರ್ಯಕ್ರಮ ನಿರೂಪಿಸಿದರು. ಎಲ್ಲೂರು ಸೇವಾ ಪ್ರತಿನಿಧಿ ಉಷಾ ವಂದಿಸಿದರು.