

ಕುಂದಾಪುರ: ನಗರದ ಚಿಕ್ಕನಸಾಲು ಶ್ರೀ ಮೈಲಾರೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಗ್ಗೆ ದೀಪಾಲಂಕಾರ, ಹೂವಿನ ಅಲಂಕಾರ ಹಾಗೂ ಶತರುದ್ರಾಭಿಷೇಕ ನಡೆಯಿತು. ಸಂಜೆ ಭಜನೆ, ಮಹಾಪೂಜೆ ಮತ್ತು ಪ್ರಸಾದ ವಿತರಣೆ ಆಗಿ, ದೇವಳದಲ್ಲಿ ಸೀನಿಯರ್ ಮತ್ತು ಜೂನಿಯರ್ ವಿಭಾಗದಲ್ಲಿ ಚುಕ್ಕಿ ರಂಗೋಲಿ ಸ್ಪರ್ಧೆ ಆಯೋಜಿಸಲಾಯಿತು. ಮೈಲಾರೇಶ್ವರ ಯುವಕ ಮಂಡಲದ 48ನೇ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿತ್ತು.