

ಬೆಳ್ತಂಗಡಿ: ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅ.31ರಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿದೆ.
ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜ ವಾರ್ಗದರ್ಶನದಲ್ಲಿ ನಡೆಯಲಿರುವ ದ.ಕ.ಜಿಲ್ಲಾ ಮಟ್ಟದ ಸಾಂಸ್ಕೃತಿಕ ತುಡರ್ ನೃತ್ಯ ಸ್ಪರ್ಧೆ, ಸರಿಗಮಪ ಖ್ಯಾತಿಯ ಕ್ಷಿತಿ ಕೆ.ರೈ ಹಾಗೂ ಅನ್ವಿತ್ ಕೊಡಗು ಅವರಿಂದ ಗಾನ ವೈಭವ, ವಿವಿಧ ಭಜನಾ ಮಂಡಳಿಯಿಂದ ಕುಣಿತ ಭಜನೆ, ಸಂಜೆ ಗೋ ಪೂಜೆ ಹಾಗೂ ಸಹಸ್ರ ಹಣತೆ ಪ್ರಜ್ವಲನೆ, ಸುಡುಮದ್ದು ಪ್ರದರ್ಶನ, ರಾತ್ರಿ 8ರಿಂದ ದೇವದಾಸ್ ಕಾಪಿಕಾಡ್ ರಚಿಸಿ ನಿರ್ದೇಶಿಸಿ, ಕಾಪಿಕಾಡು, ವಾಮಂಜೂರ್, ಸಾಯಿ ಅಭಿನಯಿಸಿರುವ ತುಳು ಹಾಸ್ಯಮಯ ನಾಟಕ ‘ಏರ್ಲಾ ಗ್ಯಾರಂಟಿ ಅತ್’ ಪ್ರದರ್ಶನ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಶಾಸಕ ಧೀರಜ್ ಮುನಿರಾಜು, ಹಿಂದು ಮುಖಂಡ ಪುನೀತ್ ಕೆರೆಹಳ್ಳಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ.ಬ್ರಿಜೇಶ್ ಚೌಟ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುವಾರ್ ಕಟೀಲ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಕಿಶೋರ್ ಕುವಾರ್ ಪುತ್ತೂರು, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ್ ನಾಕ್, ಉವಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವರ್ ಹಾಗೂ ಪ್ರೇವಾನಂದ ಶೆಟ್ಟಿ, ಮಂಡಲ ಅಧ್ಯಕ್ಷರಾದ ಶ್ರೀನಿವಾಸ ರಾವ್, ಪ.ಪಂ. ಅಧ್ಯಕ್ಷ ಜಯಾನಂದ ಗೌಡ, ಯುವ ಮೋರ್ಚಾ ಪ್ರಭಾರಿ ಮಂಡಲ ಅಧ್ಯಕ್ಷ ಪ್ರಶಾಂತ್ ಪಾರೆಂಕಿ, ಯುವ ಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಉಪಸ್ಥಿತರಿರುವರು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.