ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡಿದ್ದ ಮಾಜಿ ಕಾರ್ಪೊರೇಟರ್ ಸಿಸಿಬಿ ಬಲೆಗೆ

Jakir ex corporator bbmp
Published on

ಬೆಂಗಳೂರು: ದೇಶದ ಗಮನಸೆಳೆದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಬಳಿಕ ಮತ್ತೋರ್ವ ಆರೋಪಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪುಲಕೇಶಿನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧಿತ ಆರೋಪಿ.

ಮಾಜಿ ಮೇಯರ್ ಸಂಪತ್ ರಾಜ್​ ನ ಆಪ್ತನಾಗಿರುವ ಜಾಕೀರ್ ಗಲಭೆ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿಸಿಬಿ ಪೊಲೀಸರು ಈತನಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ.

ಜಾಕೀರ್ ಇರುವಿಕೆಯ ಸುಳಿವು ಪಡೆದ ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಜಾಕೀರ್​ನನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net