More

    ಡಿಜೆ ಹಳ್ಳಿ ಗಲಭೆಕೋರರ ಹೆಡೆಮುರಿ ಕಟ್ಟಲು ಸಿಎಂ ಸಜ್ಜು; ಗೂಂಡಾ ಕಾಯ್ದೆ, ನಷ್ಟ ವಸೂಲಿ ಬ್ರಹ್ಮಾಸ್ತ್ರ ಬಳಕೆ

    ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ದಾಂಧಲೆ ನಡೆಸಿದ್ದ ಪುಂಡರನ್ನು ಮಟ್ಟಹಾಕಲು ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಇಂದು(ಸೋಮವಾರ) ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಗೂಂಡಾ ಕಾಯ್ದೆ, ನಷ್ಟ ವಸೂಲಿ ಸೇರಿದಂತೆ ಹಲವು ಅಸ್ತ್ರ ಬಳಸುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

    ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಲಭೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಹಾಗೂ ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆ ಕೋರರಿಂದ ವಸೂಲಿ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆದೇಶದನ್ವಯ ಈ ಕ್ರಮವೆಂದು ಹೈಕೋರ್ಟಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಕಾನೂನು ಬದ್ಧವಾಗಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕ್ಲೈಂಟ್ ಕಮಿಷನರ್, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್​ಗಳನ್ನು ನೇಮಿಸಲಾಗುವುದು ಎಂದು ವಿವರಿಸಿದರು.

    ಇದನ್ನೂ ಓದಿರಿ ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

    ಗಲಭೆಕೋರರ ವಿರುದ್ಧ ಗೂಂಡಾ ಕಾಯ್ದೆ ಹಾಗೂ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ(UAPA) ಅಸ್ತ್ರ ಬಳಸಲಾಗುವುದು. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ಅಬಾಧಿತ. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

    ಈ ಸಭೆಯಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ರಾಜ್ಯ ಗುಪ್ತ ವಾರ್ತೆಯ ಅಪರ ಮಹಾ ನಿರ್ದೇಶಕ ಬಿ. ದಯಾನಂದ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್, ಕಾನೂನು ಮತ್ತು ಸುವ್ಯವಸ್ಥೆಯ ಅಪರ ಮಹಾ ನಿರ್ದೇಶಕ ಅಮರ ಕುಮಾರ್ ಪಾಂಡೆ ಪಾಲ್ಗೊಂಡಿದ್ದರು.

    ಡಿಜೆ ಹಳ್ಳಿ ಗಲಭೆ ಪ್ರಕರಣ ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಬಿಎಸ್‌ವೈ | DJ Halli rioters property confiscated

    ಡಿಜೆ ಹಳ್ಳಿ ಗಲಭೆ ಪ್ರಕರಣ ಮಹತ್ವದ ನಿರ್ಧಾರ ಕೈಗೊಂಡ ಸಿಎಂ ಬಿಎಸ್‌ವೈ #DJHalli #Rioters #Property #Confiscated

    Posted by Dighvijay News – ದಿಗ್ವಿಜಯ ನ್ಯೂಸ್ on Monday, August 17, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts