ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್​ ಸಂಪತ್​ ರಾಜ್​ ನಾಪತ್ತೆ

DJhalli
DJhalli
Published on

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಸಂಬಂಧ ಈ ಹಿಂದೆ ವಿಚಾರಣೆಗೊಳಪಟ್ಟಿದ್ದ ಮಾಜಿ ಮೇಯರ್​ ಸಂಪತ್​ ರಾಜ್​ ಇದೀಗ ನಾಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಳೆದ ತಿಂಗಳು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಇಟ್ಟ ಪುಂಡರು ದಾಂಧಲೆ ನಡೆಸಿದ್ದರು. ಅಲ್ಲದೆ ಕೆಜಿ ಹಳ್ಳಿ ಪೊಲೀಸ್​ ಠಾಣೆ ಮೇಲೂ ದಾಳಿ ಮಾಡಿದ್ದರು. ಸಿಕ್ಕಸಿಕ್ಕ ವಾಹನಗಳಿಗೂ ಬೆಂಕಿ ಹಚ್ಚಿ ಗಲಭೆ ಎಬ್ಬಿಸಿದ್ದರು. ಈ ಪ್ರಕರಣದಲ್ಲಿ ಸಂಪತ್​ ರಾಜ್​ ಹೆಸರು ಪ್ರಸ್ತಾಪವಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೊಟೀಸ್​ ಕೊಡಲು ಸಿಸಿಬಿ ಪೊಲೀಸರು ಬುಧವಾರ ಸಂಪತ್​ರಾಜ್​ ಮನೆ ಬಳಿಗೆ ಹೋಗಿದ್ದು, ಅವರು ಕಳೆದ ಒಂದು ವಾರದಿಂದ ಮನೆಯಲ್ಲಿ ಇಲ್ಲದಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿರಿ ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

ಸಂಪತ್ ರಾಜ್ ವಿರುದ್ಧ ಸಾಕ್ಷ್ಯ ಸಿಕ್ಕಿದ್ದು, ಬೆಂಕಿ ಹಚ್ಚುವ ಸಂದರ್ಭದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಮನೆಯಿಂದ ಅವರು 100

ಮೀಟರ್ ದೂರದಲ್ಲಿದ್ದರು. ಸಂತೋಷ್ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆ.4ರಂದು ಸಭೆ ನಡೆಸಿದ್ದ ಬಗ್ಗೆ ತಾಂತ್ರಿಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್‍ಗೆ ಸಂಕಷ್ಟ ಶುರುವಾಗಿದೆ.

ಪೊಲೀಸರ ಭಯದಿಂದ ಮನೆಗೆ ಬಾರದೆ ಸಂಪತ್ ರಾಜ್ ಎಸ್ಕೇಪ್ ಆಗುತ್ತಿದ್ದಾರೆ. ಕಾರು ಬಿಟ್ಟು ಆಟೋದಲ್ಲಿ ಓಡಾಡುತ್ತಿದ್ದಾರೆ ಎನ್ನಲಾಗಿದೆ. ಅಕ್ಷಮ್ಯ ಅಪರಾಧ ಎಸಗಿದವರಿಗೆ ಕಾನೂನಿನ ಬಿಸಿ ಮುಟ್ಟಿಸಲು ಸಜ್ಜಾಗಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net