

ಬೆಂಗಳೂರು: ಗಲಭೆಗೆ ಕಾರಣ ಅವರ ಕಾರ್ಯಕರ್ತ ಟ್ವೀಟ್ ಮಾಡಿದ್ದು, ಗಲಭೆ ನಿಯಂತ್ರಿಸಲು ಹೋಮ್ ಮಿನಿಸ್ಟರ್ ಕಂಪ್ಲೀಟ್ ಫೇಲ್ಯೂರ್ ಆಗಿದ್ದಾರೆ. ಮೂರು ಗಂಟೆ ಅವಧಿಯಲ್ಲಿ ಗಲಭೆ ನಿಯಂತ್ರಿಸಲಿಲ್ಲ. ಗಲಾಟೆ ಮಾಡಲು ಬಿಟ್ಬಿಟ್ಟು ಈಗ ಜಾತಿ ಬಣ್ಣ ಬಳಿಯುತ್ತಿದ್ದಾರೆ ಇವ್ರು. ಅಖಂಡ ಶ್ರೀನಿವಾಸ್ ನಮ್ಮ ಶಾಸಕ, ನಮ್ಮ ಶಾಸಕನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ನಮ್ಮ ಶಾಸಕನ ಮನೆ ಮೇಲಿನ ದಾಳಿಯನ್ನ ಕಟುವಾಗಿ ಖಂಡಿಸಿದ್ದೇವೆ... ಎಂದು ವಾಗ್ದಾಳಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಯವರ ಒಳ ತಂತ್ರದಿಂದಲೇ ಗಲಭೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಮತ್ತು ಎಸ್ಡಿಪಿಐ ರಾಜಕೀಯ ಮೇಲಾಟದಿಂದ ಗಲಭೆ ನಡೆದಿದೆ ಎಂದಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ಏಕವಚನದಲ್ಲೇ
ಬಿಜೆಪಿಯೊಳಗೆ ಸಾಕಷ್ಟು ಆಂತರಿಕ ಕಚ್ಚಾಟ ಇದೆ. ಅವರ ಒಳ ತಂತ್ರದಿಂದಲೇ ಗಲಭೆ ನಡೆದಿದ್ದು ಎಂದು ಆರೋಪಿಸಿದ ಡಿಕೆಶಿ, ಘಟನೆ ಬಗ್ಗೆ ಆಂತರಿಕ ತನಿಖೆ ಮಾಡ್ತಿದ್ದೀವಿ. ಆದರೆ, ಬಿಜೆಪಿಯವ್ರು ನಮ್ಮ ಕಾರ್ಪೋರೇಟರ್ಗಳಿಗೆ ಪೊಲೀಸರಿಂದ ಹೆದರಿಸುತ್ತಿದ್ದಾರೆ. ಇದೇ ಹೇಳಿಕೆ ಕೊಡಬೇಕು ಎಂದು ಅಖಂಡ ಶ್ರೀನಿವಾಸ್ ಮೂರ್ತಿ ಮೇಲೆ ಬಿಜೆಪಿ ಒತ್ತಡ ಹಾಕ್ತಿದೆ ಎಂದು ಹೊಸ ಬಾಂಬ್ ಸಿಡಿಸಿದರು.
ಇಂದು ಸಂವಿಧಾನಕ್ಕೆ ಅಪಚಾರವಾಗ್ತಿದೆ. ಸಂವಿಧಾನ ಅಳಿಸುವ ಮೇಲಾಟ ನಡೆದಿದೆ. ಕೋಮುವಾದ, ದ್ವೇಷದಬೀಜ ಬಿತ್ತುತ್ತಿದ್ದಾರೆ. ಈ ವಿಷ ಬೀಜವನ್ನ ನಾವು ಕಿತ್ತುಹಾಕಬೇಕಿದೆ ಎಂದ ಡಿಕೆಶಿ, ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ತರಬೇಕಿದೆ. ಮುಂದಿನ ದಿನದಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡ್ತೇವೆ. ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ. ಅದಕ್ಕೆ ನಾವು ಇಲ್ಲಿಂದಲೇ ಧ್ವನಿ ನೀಡಬೇಕಿದೆ. ಯುವಜನತೆಯ ಮೂಲಕ ಹೋರಾಟ ಮಾಡಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.