

ಬೆಂಗಳೂರು: ಗಲಭೆ ನಡೆದ ಮೂರು ದಿನದ ಬಳಿಕ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಶುಕ್ರವಾರ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆ.11ರಂದು ಗಲಭೆಕೋರರು ಕಾವಲ್ ಭೈರಸಂದ್ರದಲ್ಲಿರುವ ನಮ್ಮ ಮನೆಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿ ಚಿನ್ನಾಭರಣ ಕದ್ದು, 3 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಆರೋಪಿಗಳು ಯಾರೆಂದು ಗೊತ್ತಿಲ್ಲ. ಕಿಡಿಗೇಡಿಗಳನ್ನು ಪತ್ತೆ ಮಾಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿ ಮಾಡಿ ತನ್ನ ಕುಟುಂಬಕ್ಕೆ ಹೆಚ್ಚಿನ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.
ಆ.11ರ ರಾತ್ರಿ ಏಕಾಏಕಿ ಮನೆಗೆ ನುಗ್ಗಿದ ಉದ್ರಿಕ್ತ ಗುಂಪು, ಕೈಗೆ ಸಿಕ್ಕ ವಸ್ತುಗಳನ್ನೆಲ್ಲ ಹೊಡೆದು ಹಾಕಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ. ಮನೆಯಲ್ಲಿದ್ದ
ದೂರಿನಲ್ಲಿ ಆರೋಪಿತರ ಹೆಸರನ್ನು ಉಲ್ಲೇಖಿಸಿಲ್ಲ. ಯಾರ ವಿರುದ್ಧವೂ ಆರೋಪ ಮಾಡಿಲ್ಲ. ಅಪರಿಚಿತ ಗುಂಪು ಎಂದಷ್ಟೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಸ್ತಿನಷ್ಟದ ವಿವರ ನೀಡುವುದಾಗಿ ಶಾಸಕರು ಹೇಳಿದ್ದಾರೆ.
ಜೀವ ಭಯದ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕೇಳಿಕೊಂಡಿದ್ದೇನೆ. ರಕ್ಷಣೆ ನೀಡುವಂತೆ ಸರ್ಕಾರಕ್ಕೂ ಮನವಿ
ತನ್ನದೇ ಪಕ್ಷದ ಶಾಸಕನ ಮನೆಗೆ ಪುಂಡರು ಬೆಂಕಿ ಇಟ್ಟು ದಾಂಧಲೆ ನಡೆಸಿದ್ದರೂ ಕಾಂಗ್ರೆಸ್ ಮೌನವಾಗಿದೆ. ಪಕ್ಷದ ಶಾಸಕನ ಪ್ರಾಣಕ್ಕಿಂತ ಅಲ್ಪಸಂಖ್ಯಾತರ ಓಲೈಕೆ ಧೋರಣೆ ಅನುಸರಿಸುತ್ತಿದೆ. ಮೂರು ದಿನವಾದರೂ ಸಂತ್ರಸ್ತ ಶಾಸಕರಿಂದ ದೂರನ್ನೂ ಕೊಡಿಸಿಲ್ಲ ಎಂದು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಅಖಂಡ ಶ್ರೀನಿವಾಸ್ ಮೂರ್ತಿ ದೂರು ಕೊಟ್ಟಿದ್ದರಾದರೂ ಅಪರಿಚಿತರು ದಾಂಧಲೆ ನಡೆಸಿದ್ದಾರೆ ಎಂದು ಹೇಳಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.