ಕಾಂಗ್ರೆಸ್ ಬಣ ರಾಜಕೀಯ ಸ್ಫೋಟ; ಪಕ್ಷದ ಕಚೇರಿಯಲ್ಲೇ ನಾಯಕರ ಬಡಿದಾಟ !

blank

ವಿಜಯವಾಣಿ ಸುದ್ದಿಜಾಲ ಮಂಗಳೂರು
ಕಾಂಗ್ರೆಸ್ ಬಣ ರಾಜಕೀಯ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಮತ್ತೊಮ್ಮೆ ಸ್ಫೋಟಗೊಂಡಿದೆ. ಮಾತಿನ ಚಕಮಕಿ ಜತೆಗೆ ನಾಯಕರ ಹೊಕೈ ಕೂಡ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಬೆಂಬಲಿತ ವಿಜೇತ ಅಭ್ಯರ್ಥಿಗಳ ಸನ್ಮಾನ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ ಅವರ ನಡುವೆ ಕಾಣಿಸಿಕೊಂಡ ಅಭಿಪ್ರಾಯ ವ್ಯತ್ಯಾಸ ತೀವ್ರ ಸ್ವರೂಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಳ್ಳುವಲ್ಲಿ ಪರ‌್ಯಾವಸಾನಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮುಂತಾದ ಪಕ್ಷದ ಹಿರಿಯ ಮುಖಂಡರು ಇಡೀ ಘಟನೆಗೆ ಸಾಕ್ಷಿಯಾದರು.
ಮುಂಬರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯರು, ಮಾಜಿ ಶಾಸಕರ ಸಭೆ ಹಾಗೂ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ವಿಜೇತರಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪಕ್ಷದ 24 ಮಂದಿಗೆ ಸನ್ಮಾನ ಆಯೋಜಿಸಲಾಗಿತ್ತು.
ವಿಜೇತ ಸದಸ್ಯರ ಸನ್ಮಾನ ಸಂದರ್ಭದಲ್ಲಿ ಸದಸ್ಯರು ಕುಳಿತ ಸ್ಥಳದಲ್ಲಿಯೇ ಸನ್ಮಾನ ನಡೆಸಲು ಪಕ್ಷದ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ಮುಂದಾದರು. ಆದರೆ ವೇದಿಕೆಯಲ್ಲಿ ಸನ್ಮಾನ ನಡೆಸುವಂತೆ ಚಂದ್ರ ಪ್ರಕಾಶ್ ಶೆಟ್ಟಿ ಈ ಸಂದರ್ಭ ಸಲಹೆ ನೀಡಿದ್ದು ಪಕ್ಷದೊಳಗಿನ ಭಿನ್ನಮತ ಸೋಟಕ್ಕೆ ನಾಂದಿಯಾಯಿತು. ಈ ಸಣ್ಣ ವಿಚಾರದಲ್ಲಿ ಆರಂಭಗೊಂಡ ವಾಗ್ವಾದ ಕಲಹ ಸ್ವರೂಪ ಪಡೆಯಿತು ಎಂದು ಸಭೆಯಲ್ಲಿ ಪಾಲ್ಗೊಂಡವರು ತಿಳಿಸಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಗಲಾಟೆ ನಡೆಸ ವಿಷಯ ತಿಳಿದ ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಧಾವಿಸಿದರು.
* ಹೊಡೆದಾಟ ನಿರಾಕರಣೆ
ಗಲಭೆ ಬಳಿಕ ಕಾಂಗ್ರೆಸ್ ಭವನದಿಂದ ಹೊರಗೆ ಆಗಮಿಸಿದ ಹರೀಶ್ ಕುಮಾರ್ ಹಾಗೂ ಚಂದ್ರ ಪ್ರಕಾಶ್ ಶೆಟ್ಟಿ ಇಬ್ಬರು ಹೊಡೆದಾಟ ನಡೆದಿರುವುದನ್ನು ನಿರಾಕರಿಸಿದ್ದಾರೆ.
ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯತ್ಯಾಸಗಳು ಬಂದಿರುವುದು ನಿಜ. ಎಲ್ಲವನ್ನೂ ನಾವು ಬಗೆಹರಿಸಿಕೊಂಡಿದ್ದೇವೆ. ಸಾಮಾಜಿಕ ಮಾಧ್ಯಮಗಳಲ್ಲಿ ಬಂದಿರುವಂತೆ ಏನೂ ನಡೆದಿಲ್ಲ. ಹೊಡೆದಾಟ ನಡೆದಿಲ್ಲ ಎಂದು ಕೆ.ಹರೀಶ್ ಕುಮಾರ್ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

Share This Article

ಚಳಿಗಾಲದಲ್ಲಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿಕೊಳ್ಳಬಹುದೇ? aloe vera gel benefits

aloe vera gel benefits : ಚಳಿಗಾಲದಲ್ಲಿ ತಲೆಹೊಟ್ಟು ಸಾಮಾನ್ಯ. ಚಳಿಗಾಲದಲ್ಲಿ ಶುಷ್ಕ ಗಾಳಿಯು ನಮ್ಮ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆ ಕುಡಿದರೆ ಏನಾಗುತ್ತೆ ಗೊತ್ತಾ? Coconut Oil Benefits

Coconut Oil Benefits:  ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಆಹಾರವೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ.…

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…