ಪಕ್ಷ ಸೇರ್ಪಡೆ ಬೆನ್ನಲ್ಲೇ ವಿಶೇಷವಾಗಿ ಕುಸುಮಾಗೆ ಡಿಕೆಶಿ ಮಾಡಿದ ತಾಕೀತು ಏನು?

DKS
Published on

ಬೆಂಗಳೂರು: ದಿವಂಗತ ಐಎಎಸ್​ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅವರು ಭಾನುವಾರ (ಅಕ್ಟೋಬರ್​ 4) ಅಧಿಕೃತವಾಗಿ ತಂದೆ ಹನುಮಂತರಾಯಪ್ಪ ಜತೆಯಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.​

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಡಿಸಿಎಂ ಪರಮೇಶ್ವರ್ ಸಮ್ಮುಖದಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಅವರು ಕಾಂಗ್ರೆಸ್​ಗೆ ಸೇರ್ಪಡೆಯಾದರು.

ತಂದೆ ಮತ್ತು ಮಗಳಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ನೀಡಿ ಕೈ ನಾಯಕರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಇದರ ಬೆನ್ನಲ್ಲೇ ಡಿಕೆಶಿ ಅವರು ಕುಸುಮಾರಿಗೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ಕೊಡದಂತೆ ತಾಕೀತು ಮಾಡಿದ್ದಾರೆಂದು ತಿಳಿದುಬಂದಿದೆ.

ಇದೇ ಕಾರಣಕ್ಕೆ ಪಕ್ಷ ಸೇರ್ಪಡೆಗೊಂಡ ಬಳಿಕ ಕುಸುಮಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಮನೆಗೆ ತೆರಳಿದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net