ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ಪರಿಶೀಲಿಸದೆ ಬಿಲ್​ ಪಾವತಿಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್​

Dk Shivakumar
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಡೆಹಿಡಿದಿರುವ ಎಲ್ಲಾ ಕಾಮಗಾರಿಗಳನ್ನು ಪರಿಶೀಲಿಸಿದೆ ಬಳಿಕವೇ ಹಣ ಬಿಡುಗಡೆ ಮಾಡಲಾಗುವುದು. ಪರಿಶೀಲನೆ ನಡೆಸದೆ ಯಾವುದೇ ಕಾಮಗಾರಿಯ ಬಿಲ್​ ಪಾವತಿ ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ಧಾರೆ.

ಬುಧವಾರ ವಿಕಾಸಸೌಧದಲ್ಲಿ ಬ್ರ್ಯಾಂಡ್ ಬೆಂಗಳೂರು ವೆಬ್​ಸೈಟ್​ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಡಿಕೆಶಿ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳಲ್ಲಿ ಏನೆಲ್ಲ ನಡೆದಿದೆ ಎಂಬುದು ಗೊತ್ತಿದೆ. ಗುತ್ತಿಗೆದಾರರು ಎಷ್ಟು ಜೋರಾಗಿ ಬೇಕಾದರೂ ಕೂಗಾಡಲಿ ಯಾವುದಕ್ಕೂ ಜಗ್ಗುವುದಿಲ್ಲ ಎಂದಿದ್ದಾರೆ.

SIT ರಚನೆ

ರಾಜರಾಜೇಶ್ವರಿನಗರ ವಲಯದಲ್ಲಿ ಕಾಮಗಾರಿ ನಡೆಸದೆ ನೂರಾರು ಕೋಟಿ ರೂಪಾಯಿ ಬಿಲ್​ ಪಾವತಿಸಿರುವುದು ಲೋಕಾಯುಕ್ತ ತನಿಖೆ ವೇಳೆ ಬೆಳಕಿಗೆ ಬಂದಿದೆ. ಬೇರೆ ಕಡೆಗಳಲ್ಲಿ ಏನು ನಡೆದಿದೆ ಎಂಬುದು ನೋಡಬೇಕಲ್ಲವೇ ಎಂದು ಪ್ರಶ್ನಿಸಿದ್ಧಾರೆ.

Dk Shivakumar

ಭೌತಿಕ ಸ್ಥಿತಿ ಪರಿಶೀಲಿಸದೆ ಬಿಲ್​ ಪಾವತಿ ಮಾಡಲು ಅವಕಾಶ ನೀಡುವುದಿಲ್ಲ. ಬಿಡಿಎ ಮತ್ತು ಬಿಬಿಎಂಪಿಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(SIT)ವನ್ನು ರಚಿಸಬೇಕಿದೆ. ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದರ ಪರಿಷ್ಕರಣೆ

ಘನತ್ಯಾಜ್ಯ ನಿರ್ವಹಣೆ, ಸಂಚಾರ ದಟ್ಟಣೆ, ನೀರು ಪೂರೈಕೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬದಲಾವಣೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಸಾಋ್ವಜನಿಕರು, ತಜ್ಞರು, ವಿವಿಧ ಕ್ಷೇತ್ರಗಳ ಪ್ರಮುಖರ ಅಭಿಪ್ರಾಯಗಳನ್ನು ಸಂಗ್ರಹಿಸಿ ಯೋಜನೆಗಳನ್ನು ರೂಪಿಸಲಾಗುವುದು. BWSSBಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ನೀರಿನ ಬಿಲ್​ ದರ ಪರಿಷ್ಕರಣೆ ಆಗಿಲ್ಲ. ಈ ಬಗ್ಗೆಯೂ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು ಅಭಿವೃದ್ದಿ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ವೆಬ್​ಸೈಟ್​ ಮೂಲಕ ತಿಳಿಸಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net