More

    ಕಾವೇರಿಗಾಗಿ ಹೋರಾಡುತ್ತಿರುವವರು ಮೇಕೆದಾಟು ಯೋಜನೆ ಜಾರಿಗೆ ಏಕೆ ಆಗ್ರಹಿಸುತ್ತಿಲ್ಲ: ಡಿ.ಕೆ. ಶಿವಕುಮಾರ್

    ಬೆಂಗಳೂರು: ಕಾವರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಬಿಕ್ಕಟ್ಟಿಗೆ ಮೇಕೆದಾಟು ಯೋಜನೆ ಒಂದೇ ಪರಿಹಾರ. ಈ ವಿಚಾರದಲ್ಲಿ ರಾಜಕಾರಣ ಮಾಡುವುದರಲ್ಲಿ ಯಾವುದೇ ಪ್ರಯೋಜನವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.

    ಕಾವೇರಿ ನೀರಿಗಾಗಿ ಅನೇಕ ಸಂಘಟನೆಗಳು ಹೋರಾಟ ನಡೆಸುತ್ತಿರುವುದು ಒಳ್ಳೆಯ ವಿಚಾರ. ಆದರೆ, ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದಾಗ ಈ ಸಂಘಟನೆಗಳು ಎಲ್ಲಿಗೆ ಹೋಗಿದ್ದವು. ಯೋಜನೆ ಜಾರಿ ಮಾಡುವಂತೆ ಏಕೆ ಈ ಸಂಘಟನೆಗಳು ಆಗ್ರಹಿಸಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮಾತನಾಡುತ್ತಿರುವ ಸಂಘಟನೆಗಳಾಗಲಿ, ಬಿಜೆಪಿ-ಜೆಡಿಎಸ್​ ನಾಯಕರಾಗಲಿ ಯೋಜನೆಗೆ ಅನುಮತಿ ನೀಡಿ ಎಂದು ಕೇಂದ್ರ ಸರ್ಕಾರವನ್ನು ಏಕೆ ಆಗ್ರಹಿಸುತ್ತಿಲ್ಲ. ಇದುವರೆಗೂ ಪರಿಸರ ಇಲಾಖೆಯಿಂದ ಯಾಕೆ ಅನುಮತಿ ಕೊಡಿಸಿಲ್ಲ. ನಮ್ಮ ವಿರುದ್ಧ ಮಾತನಾಡುತ್ತಿರುವವರು ಕೇಂದ್ರ ಸರ್ಕಾರದ ವಿರುದ್ದ ಹೋರಾಟ ಮಾಡಬೇಕಲ್ಲವೇ ಎಂದಿದ್ದಾರೆ.

    ಇದನ್ನೂ ಓದಿ: ವೈಯಕ್ತಿಕ ಕಾರಣಗಳಿಂದ ತವರಿಗೆ ವಾಪಸ್ಸಾದ ವೇಗಿ ಬುಮ್ರಾ; ನೇಪಾಳ ಪಂದ್ಯದಿಂದ ಔಟ್​

    ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ದವಾಗಿದೆ. ತಮಿಳುನಾಡಿನವರು ಪ್ರತಿನಿತ್ಯ 24 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಕೇಳಿದ್ದರು. ಪ್ರತಿನಿತ್ಯ 3 ಸಾವಿರ ಕ್ಯೂಸೆಕ್​ ನೀರು ಬಿಡಲು ಮಾತ್ರ ಸಾಧ್ಯ ಎಂದು ನಮ್ಮ ವಕೀಲರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಇದರ ಪರಿಣಾಮವಾಗಿ ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಆದೇಶಿಸಿದೆ.

    ನಾವು ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚಿಸಿದ್ದೇವೆ. ನಮ್ಮ ಅಣೆಕಟ್ಟುಗಳ ಪರಿಸ್ಥಿತಿ ಹೇಗಿದೆ ಎಂಬುದರ ವಾಸ್ತವ ಸ್ಥಿತಿಯನ್ನು ಅವರಿಗೆ ಮನವರಿಕೆ ಮಾಡಲಿದ್ದೇವೆ. ನ್ಯಾಯಾಲಯದಲ್ಲೂ ನಾವು ನಮ್ಮ ರೈತರ ಹಿತ ಕಾಯಲು ಬದ್ದರಾಗಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ನದಿ ನೀರು ಹಂಚಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts