ಬೆಳಗಾವಿ: ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.
ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣದ ಕುರಿತು ಪ್ರತಿಕ್ರಿಯಿಸಿ, ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತನ್ನ ಮರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ತಾಯಿ ಶ್ವಾನ; ಮನಕಲುಕುವ Video Viral
KL Rahul ಅಲ್ಲವೇ ಅಲ್ಲ… ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಯಾರು ಎಂಬುದನ್ನು ರಿವೀಲ್ ಮಾಡಿದ RCB ಕೋಚ್