

ಬೆಂಗಳೂರು: ಕೇರಳದಲ್ಲಿ ನನ್ನ ಮೇಲೆ ಪ್ರಯೋಗ ನಡೀತಿದೆ. ಯಾರು ಮಾಡಿಸುತ್ತಿದ್ದಾರೆ ಎಂಬ ವಿಚಾರವೂ ನನಗೆ ಗೊತ್ತು ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ನನ್ನ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಪೂಜೆ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ.
ನನ್ನ ವಿರುದ್ಧ ವಿರೋಧಿಗಳು ದೊಡ್ಡ ಪ್ರಯೋಗ ಮಾಡಿಸುತ್ತಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನನ್ನ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಿಸಿದ್ದಾರೆ. ಅಘೋರಿಗಳ ಮೂಲಕ ಶತ್ರು ಬೈರವಿ ಯಾಗ, ಪಂಚ ಬಲಿ ಕೊಡುತ್ತಿದ್ದಾರೆ. ಇದನ್ನೆಲ್ಲಾ ಯಾರು ಮಾಡಿಸುತ್ತಿದ್ದಾರೆ ಎಂಬುದು ನಮಗೆ ಗೊತ್ತು. ನಾವು ನಂಬಿದ ದೇವರು ನಮ್ಮ ಮಕೈ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇತ್ತ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯೂ ರಾಜಕೀಯ ವಲಯದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದ್ದು ಮುಂದಿನ ದಿನಗಳಲ್ಲಿ ಇದು ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಿದೆ.