20.4 C
Bangalore
Monday, December 9, 2019

ಡಿ.ಕೆ.ಶಿವಕುಮಾರ್​ಗೆ ತೀರದ ಸಂಕಷ್ಟ: ಮತ್ತೆ ನಾಲ್ಕು ದಿನಗಳ ಕಾಲ ಇ.ಡಿ. ಕಸ್ಟಡಿಗೆ ಒಪ್ಪಿಸಿದ ನ್ಯಾಯಾಲಯ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೆಂಗಳೂರು/ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಅವರನ್ನು ಜಾರಿ ನಿರ್ದೇಶನಾಲಯದ(ಇ.ಡಿ.) ವಿಶೇಷ ನ್ಯಾಯಾಲಯ ಮತ್ತೆ 4 ದಿನಗಳ ಕಾಲ ಇ.ಡಿ. ಅಧಿಕಾರಿಗಳ ಕಸ್ಟಡಿಗೆ ನೀಡಿದೆ. ಸೆ.17ರವರೆಗೆ ಡಿಕೆಶಿ ಅವರು ಮತ್ತೆ ಅಧಿಕಾರಿಗಳ ವಿಚಾರಣೆ ಎದುರಿಸಬೇಕಾಗಿದೆ.

ಡಿಕೆಶಿ ಬಂಧನದ ನಂತರ ವಿಚಾರಣೆಗೆಂದೆ 10 ದಿನಗಳ ಕಾಲ ಡಿಕೆಶಿ ಅವರನ್ನು ಇ.ಡಿ. ಅಧಿಕಾರಿಗಳ ವಶಕ್ಕೆ ನ್ಯಾಯಾಲಯ ನೀಡಿತ್ತು. ಇಂದಿಗೆ ವಿಚಾರಣಾ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಡಿಕೆಶಿ ಅವರನ್ನು ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಡಿಕೆಶಿ ಪರ ವಾದ ಮಂಡಿಸಿದ ಅಭಿಷೇಕ್​ ಮನು ಸಿಂಘ್ವಿ ರಿಮಾಂಡ್ ಅರ್ಜಿಯನ್ನು ನಿನ್ನೆಯೇ ಕೊಡಬೇಕಿತ್ತು. ಇಂದು ನೀಡಿರುವುದರಿಂದ ನಾವಿದನ್ನು ಒಪ್ಪಲ್ಲ. ನನ್ನ ಕಕ್ಷಿದಾರರನ್ನು ಮತ್ತೆ ಕಸ್ಟಡಿಗೆ ನೀಡುವುದನ್ನು ವಿರೋಧಿಸುತ್ತೇವೆ. 130 ಗಂಟೆಯ ವಿಚಾರಣೆ ವೇಳೆ ನಿದ್ದೆ ಹಾಗೂ ಸುಸ್ತು ಸಹಜವಾಗಿ ಬರುತ್ತದೆ. ಇಂಥದ್ದನ್ನೆಲ್ಲ ಇ.ಡಿ. ತನ್ನ ಅರ್ಜಿಯಲ್ಲಿ ಹಾಕಿದ್ದನ್ನು ನೋಡಿ ನಗು ಬರುತ್ತಿದೆ. ಈ ಪ್ರಕರಣದ ಇತರೆ ಆರೋಪಿಗಳಿಗೆ ರಕ್ಷಣೆ ನೀಡಲಾಗಿದೆ. ಆದರೆ, ಡಿಕೆಶಿಗೆ ಸಂಬಂಧಿಸಿದಂತೆ ಇ.ಡಿ. ರಿಮಾಂಡ್ ಕೇಳುತ್ತಿದೆ ಎಂದು ವಿರೋಧಿಸಿದರು.

ಸಿಂಘ್ವಿ ವಾದದ ಮಧ್ಯೆ ಪ್ರವೇಶಿಸಿದ ಇ.ಡಿ. ಪರ ವಕೀಲ ನಟರಾಜ್​​, ಆರೋಪಿ ಬಗ್ಗೆ ಹೇಗೆ? ಯಾವ ಸಮಯಕ್ಕೆ ತನಿಖೆ ಮಾಡಬೇಕು ಎಂಬುದು ತನಿಖಾ ಸಂಸ್ಥೆಗೆ ಬಿಟ್ಟ ವಿಷಯ ಎಂದು ಹೇಳಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಡಿಕೆಶಿ ಅವರನ್ನು ಮತ್ತೆ ನಾಲ್ಕು ದಿನ ಇ.ಡಿ.ವಶಕ್ಕೆ ನೀಡಿದ್ದು, ಸೆ.17ರವರೆಗೆ ವಿಚಾರಣೆ ಮುಂದುವರಿಯಲಿದೆ. ಈ ನಡುವೆ ಡಿಕೆಶಿ ಆರೋಗ್ಯ ಪ್ರಶ್ನೆ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಇ.ಡಿ. ಕಸ್ಟಡಿಯಲ್ಲೇ ಡಿಕೆಶಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತನಿಖಾಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿದೆ. ಮೊದಲು ಡಿಕೆಶಿ ಆರೋಗ್ಯಕ್ಕೆ ಆದ್ಯತೆ ನೀಡಿ, ಅನಂತರ ನಿಮ್ಮ ವಿಚಾರಣೆಯನ್ನ ನಡೆಸಿ ಎಂದು ಕೋರ್ಟ್​ ತಿಳಿಸಿದ್ದು, ಜಾಮೀನು ವಿಚಾರವಾದ ಆದೇಶವನ್ನು ಕಾಯ್ದಿರಿಸಿದೆ. (ದಿಗ್ವಿಜಯ ನ್ಯೂಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...