ಅಧಿವೇಶನದ ಬಳಿಕ ಪೌರಕಾರ್ಮಿಕರ ಸಮಸ್ಯೆಗೆ ಪರಿಹಾರ: ಡಿಸಿಎಂ DK Shivakumar ಭರವಸೆ

DK Shivakumar

ಬೆಂಗಳೂರು: ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ (DK Shivakumar) ಭರವಸೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್​​ನಲ್ಲಿ ಪೌರಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಶಿವಕುಮಾರ್ (DK Shivakumar), ಕಳೆದ 25 ವರ್ಷಗಳಿಂದ ಮಾತ್ರವಲ್ಲ, ಈ ಸಮಾಜ ಆರಂಭವಾದಾಗಿನಿಂದಲೂ ನೀವು ಈ ಕೆಲಸ ಮಾಡುತ್ತಾ ಸೇವೆ ಮಾಡುತ್ತಿದ್ದೀರಿ.  ಪೌರಕಾರ್ಮಿಕರ ಬಗ್ಗೆ ನಮಗೆ ಸಹಾನುಭೂತಿ ಇದೆ. ವಿಧಾನಮಂಡಲ ಅಧಿವೇಶನದ ಬಳಿಕ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು.

ಕಳೆದ ಸರ್ಕಾರದ ಅವಧಿಯಲ್ಲಿ ನೀವು ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಲಾಗಿತ್ತು. ಆಗ ನಿಮ್ಮ ಜತೆ ಚರ್ಚೆ ಮಾಡಲಾಗಿತ್ತು. ಈಗಲೂ ನೀವು ಹೋರಾಟ ಮಾಡುತ್ತಿದ್ದೀರಿ. ದೇಶದ ವಿವಿಧ ಭಾಗಗಳಲ್ಲಿ ಬೇರೆ ವ್ಯವಸ್ಥೆ ಇವೆ. ಏನೇ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕು. ಖಾಸಗಿಯವರ ಜತೆ ಗುತ್ತಿಗೆ ಆಧಾರದ ಮೇಲೆ ನೀವು ಕೆಲಸ ಮಾಡುತ್ತಿದ್ದೀರಿ. ನಿಮಗೆ ಎಲ್ಲಾ ರೀತಿಯಲ್ಲೂ ಸೂಕ್ತವಾಗುವಂತೆ ನೆರವು ನೀಡಬೇಕಿದೆ.

ಈ ವಿಚಾರವಾಗಿ ನಮ್ಮ ಸರ್ಕಾರ ಸಿಎಂಸಿ ಮಟ್ಟದಲ್ಲಿ ಕೆಲವು ಪರಿಹಾರ ತೆಗೆದುಕೊಂಡಿದೆ. ಅಧಿವೇಶನದ ಬಳಿಕ ನಿಮ್ಮಲ್ಲಿರುವ ಎಲ್ಲಾ ಗುಂಪುಗಳನ್ನು ಕರೆಸಿ ಚರ್ಚೆ ಮಾಡಿ ಕಾನೂನು ಚೌಕಟ್ಟಿನಲ್ಲಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಪರಿಹಾರ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ (DK Shivakumar) ಹೇಳಿದ್ದಾರೆ.

36 ರನ್​ಗೆ ಆಲೌಟ್… ಪಿಂಕ್​ ಬಾಲ್​ ಟೆಸ್ಟ್​ಗೂ ಮುನ್ನ Team India ಬಗ್ಗೆ ವ್ಯಂಗ್ಯವಾಡಿದ ಆಸೀಸ್​ ಬ್ಯಾಟರ್​

ಮದುವೆಗೆ ಮುನ್ನ ಕಣ್ಮರೆಯಾದ ವರ; ಆತನನ್ನು ಒತ್ತೆಯಾಳಾಗಿ ಇರಿಸಿಕೊಂಡು ವಧುವಿನ ಕುಟುಂಬ ಮಾಡಿದ್ದೇನು ಗೊತ್ತಾ?

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…