ಲಿಂಗಾಯತ ಪ್ರತ್ಯೇಕ ಧರ್ಮದ ಹೇಳಿಕೆ ನನ್ನ ವೈಯಕ್ತಿಕ ಅಭಿಪ್ರಾಯ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಹೇಳಿಕೆ ವಿಚಾರವಾಗಿ ನಾನು ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ತಪ್ಪು ತಿದ್ದಿಕೊಳ್ಳಬೇಕು ಎಂದು ಹೇಳಿದ್ದೇನೆ ಎಂದು ಸಚಿವ ಡಿ.ಕೆ.ಶಿವಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಎಂ.ಬಿ.ಪಾಟೀಲ್ ನನ್ನ ಒಳ್ಳೆಯ ಸ್ನೇಹಿತರು. ಅದರಿಂದ ಆದ ಸಾಧಕ – ಬಾಧಕಗಳ ಬಗ್ಗೆ ಹೇಳಿದ್ದೇನೆ. ನಾನು ಯಾರನ್ನು ಗೆಲ್ಲಿಸಿಕೊಂಡು ಬರುವಷ್ಟು ದೊಡ್ಡವನಲ್ಲ. ಒಂದು ಕ್ಷೇತ್ರದಲ್ಲೂ ಗೆಲ್ಲಿಸುವಷ್ಟು ಶಕ್ತಿ ಕೂಡ ನನಗೆ ಇಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರ ಕೈಗೆತ್ತಿಕೊಂಡಿದ್ದು ತಪ್ಪು ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಹೇಳಿದ್ದಾರೆ.

ನನ್ನ ಆತ್ಮಸಾಕ್ಷಿಯನ್ನು ಸೂಕ್ತ ಕಾಲದಲ್ಲಿ ಬಹಿರಂಗಪಡಿಸಿದ್ದೇನೆ. ಎಲ್ಲರನ್ನು ಸಮಾಧಾನಪಡಿಸಲು ಸಾಧ್ಯವಿಲ್ಲ. ರಾಜಕೀಯದಲ್ಲಿ ಧರ್ಮವಿರಬೇಕು. ಧರ್ಮದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದ್ದೇನೆ. (ದಿಗ್ವಿಜಯ ನ್ಯೂಸ್)