More

    ಡಿಜಿಪಿಯನ್ನೇ ನಾಲಾಯಕ್​ ಎಂದ ಡಿಕೆಶಿ!

    ಬೆಂಗಳೂರು: ಪೊಲೀಸ್ ಮಹಾ ನಿರ್ದೇಶಕ ಬಿಜೆಪಿಯ ಬಾಲಬಡುಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನಾಲಾಯಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (ಡಿಕೆಶಿ) ವಾಗ್ದಾಳಿ ನಡೆಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಇತಿಹಾಸ ತಿರುಚಲು ಉರಿಗೌಡ, ನಂಜೇಗೌಡ ದ್ವಾರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಜಿಪಿ ಪ್ರವೀಣ್ ಸೂದ್ ಒಳ್ಳೆಯವರು, ನಿಷ್ಪಕ್ಷಪಾತ ವ್ಯಕ್ತಿ ಅಂದುಕೊಂಡಿದ್ದೆ ಎಂದ ಅವರು ಬಿಜೆಪಿಯವರು ಉರಿಗೌಡ, ನಂಜೇಗೌಡರ ಹೆಸರು ತೆಗೆದುಕೊಂಡಿದ್ದಾರೆ. ಇವರ ಇತಿಹಾಸ ಎಲ್ಲಿದೆ? ಇವರ ಹೆಸರು ಸೃಷ್ಟಿಸಿ ಇಡೀ ಒಕ್ಕಲಿಗ ಸಮುದಾಯಕ್ಕೆ ಮೋಸ ಮಾಡಲು ಬಿಜೆಪಿಯವರು ಷಡ್ಯಂತ್ರ ರೂಪಿಸಿದ್ದಾರೆ. ಒಕ್ಕಲಿಗರಿಗೆ ಅವಮಾನ ಮಾಡುತ್ತಿದ್ದಾರೆ. ಇವರ ಹೆಸರಲ್ಲಿ ದ್ವಾರ ಮಾಡುವಂತೆ ಯಾರು ಕೇಳಿದ್ದರು? ಇವರು ಇದ್ದರು ಎಂಬುದಕ್ಕೆ ಎಲ್ಲಾದರೂ ದಾಖಲೆಗಳಿವೆಯೇ? ಈ ಡಿಜಿಪಿ ನಾಲಾಯಕ್. ಅವರು ಸರ್ಕಾರದ ಮಾತು ಕೇಳಿಕೊಂಡು ಇದಕ್ಕೆ ಅವಕಾಶ ನೀಡಿದ್ದಾರೆ. ಕೂಡಲೇ ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಚುನಾವಣಾ ಆಯೋಗ ಕೂಡ ಅವರನ್ನು ಬೇರೆಡೆಗೆ ವರ್ಗಾಯಿಸಬೇಕು. ಅವರು ಆ ಹುದ್ದೆಗೆ ಬಂದು ಮೂರು ವರ್ಷವಾಯ್ತು. ಇನ್ನೂ ಯಾಕೆ ಅಲ್ಲಿಟ್ಟಿದ್ದಾರೆ. ಕಾಂಗ್ರೆಸ್ ಹೋರಾಟ ಮಾಡಿದರೆ ನಮ್ಮ ಮೇಲೆ 25 ಕೇಸ್ ಹಾಕುತ್ತಾರೆ. ಈ ರೀತಿ ಅನಧಿಕೃತ ದ್ವಾರ ಹಾಕಿದವರ ಮೇಲೆ ಪ್ರಕರಣ ದಾಖಲಿಸಿಲ್ಲ ಎಂದು ಹೇಳಿದರು.

    ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಡಿಜಿಪಿ ಸೇರಿದಂತೆ ಯಾರೆಲ್ಲಾ ಸರ್ಕಾರದ ಕೈಗೊಂಬೆಯಾಗಿ ಯಾರೆಲ್ಲಾ ಕೆಲಸ ಮಾಡಿದ್ದಾರೋ ಅವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts