ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಕೂಗಿಗೆ ಸಿದ್ದರಾಮಯ್ಯ ಬಣದ ನಾಯಕರು ಪ್ರಮುಖವಾಗಿ ಆಗ್ರಹಿಸುತ್ತಿದ್ದು, ದೆಹಲಿಗೆ ಪ್ರಯಾಣ ಬೆಳೆಸಿ ರಾಷ್ಟ್ರೀಯ ನಾಯಕರ ಬಳಿ ತನ್ನ ಅಹವಾಲನ್ನು ಸಲ್ಲಿಸುತ್ತಿದ್ದಾರೆ. ಇದೆಲ್ಲದರ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಕೆಪಿಸಿಸಿ ಅಧ್ಯಕ್ಷದ ಬದಲಾವಣೆ ಸುಳಿವನ್ನು ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಗರಿಗೆದರಿವೆ.
ಎಐಸಿಸಿ ಅಧ್ಯಕ್ಷರ ಹೇಳಿಕೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಮಾರ್ಮಿಕ ಟ್ವೀಟ್ ಒಂದನ್ನು ಮಾಡಿದ್ದು, ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಈ ಟ್ವೀಟ್ ಹೊರಬಂದಿರುವುದು ಹೊಸ ಚರ್ಚೆಗೆ ನಾಂದಿ ಹಾಡಿದೆ.
ಪ್ರಯತ್ನ ವಿಫಲವಾಗಬಹುದು,
ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ!ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಗಂಗಾ ಆರತಿ ನೆರವೇರಿಸಿ, ಭಗವಂತನಲ್ಲಿ ಪ್ರಾರ್ಥಿಸಿದೆ. ಪುಣ್ಯಸ್ನಾನ ಮಾಡಿ ಭಕ್ತಿ-ಭಾವಗಳಲ್ಲಿ ಮಿಂದು ಭಾವಪರವಶನಾದೆ. pic.twitter.com/cWrSu5MZNc
— DK Shivakumar (@DKShivakumar) February 12, 2025
ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ! ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಗಂಗಾ ಆರತಿ ನೆರವೇರಿಸಿ, ಭಗವಂತನಲ್ಲಿ ಪ್ರಾರ್ಥಿಸಿದೆ. ಪುಣ್ಯಸ್ನಾನ ಮಾಡಿ ಭಕ್ತಿ-ಭಾವಗಳಲ್ಲಿ ಮಿಂದು ಭಾವಪರವಶನಾದೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಟ್ವೀಟ್ ಮಾಡಿದ್ದಾರೆ. ಸದ್ಯ ಈ ಟ್ವೀಟ್ ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಯನ್ನ ಹುಟ್ಟುಹಾಕಿದೆ.
ಎಐಸಿಸಿ ಅಧ್ಯಕ್ಷರು ಹೇಳಿದ್ದೇನು?
ಓಡಿಸ್ಸಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದೇನೆ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತದೆ. ಈ ಬಗ್ಗೆ ಯಾರನ್ನು ಬದಲಾವಣೆ ಮಾಡಲಾಗುತ್ತದೆ ಎಂಬುದನ್ನು ಸ್ಪಷ್ಟವಾಗಿ ಹೇಳಲಿಕ್ಕೆ ಆಗಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದೆರಡು ದಿನದಲ್ಲಿ ಕೆಲವು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತೇವೆ. ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಹೇಳಿದ್ದಾರೆ.
Team India ಆಲ್ರೌಂಡ್ ಪ್ರದರ್ಶನಕ್ಕೆ ಆಂಗ್ಲರು ಕ್ಲೀನ್ ಬೌಲ್ಡ್; ಸರಣಿ ಕ್ಲೀನ್ಸ್ವೀಪ್ ಮಾಡಿದ ಆತಿಥೇಯರು