More

    ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ: ಡಿಕೆಶಿ ಬಿಗಿ ಪಟ್ಟು, ಕಾಂಗ್ರೆಸ್​ ಹೈಕಮಾಂಡ್ ಕಂಗಾಲು

    ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಇದೀಗ ಎಲ್ಲರ ಮುಂದಿರುವ ಪ್ರಶ್ನೆ ಏನೆಂದರೆ, ಮುಖ್ಯಮಂತ್ರಿ ಯಾರಾಗ್ತಾರೆ ಎಂಬುದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ನಡುವೆ ತೀವ್ರ ಪೈಪೋಟಿ ಇದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ ಡಿಕೆಶಿ, ಬಿಗಿ ಪಟ್ಟು ಹಿಡಿದಿರುವುದರಿಂದ ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನಕ್ಕೆ ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

    ಸದ್ಯ ಕಾಂಗ್ರೆಸ್​ ಮುಂದು ಎರಡೂವರೆ ವರ್ಷ ಸಿದ್ದರಾಮಯ್ಯ ಇನ್ನೆರೆಡೂವರೆ ವರ್ಷ ಡಿಕೆಶಿ ಎಂಬ ಸೂತ್ರ ರೆಡಿಯಾಗಿದೆ. ಆದರೆ, ಈ ಸೂತ್ರಕ್ಕೆ ಡಿಕೆಶಿ ಒಪ್ಪಿಗೆ ನೀಡುತ್ತಿಲ್ಲ ಎಂಬ ಮಾತುಗಳು ಕಾಂಗ್ರೆಸ್​ ವಲಯದಲ್ಲಿ ಕೇಳಿಬರುತ್ತಿದೆ. ಸಿಎಂ ಸ್ಥಾನ ಸಿಗದಿದ್ದರೆ ಸಚಿವ ಸ್ಥಾನವೂ ಬೇಡ ಎಂದು ಡಿಕೆಶಿ ಹೇಳುತ್ತಿದ್ದಾರೆ ಎನ್ನಲಾಗಿದೆ.

    ಇದನ್ನೂ ಓದಿ: ಸ್ವಂತ ಹೆಂಡತಿಯ ಬಾತ್​ರೂಮ್ ಹಾಗೂ ಬೆಡ್​ರೂಮ್​ಗೆ ಸಿಸಿಟಿವಿ ಅಳವಡಿಸಿದ ಭೂಪ!

    ಡಿಕೆಶಿ ಬಿಗಿ ಪಟ್ಟಿಗೆ ಇದೀಗ ಕಾಂಗ್ರೆಸ್​ ಹೈಕಮಾಂಡ್​ ಕಂಗಲಾಗಿದೆ. ಕಾಂಗ್ರೆಸ್​ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರದ್ದೂ ಪಾತ್ರವಿದೆ. ಆದರೆ, ಸಿದ್ದರಾಮಯ್ಯರನ್ನು ಕಡೆಗಣಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಇದೇ ರೀತಿ ಡಿಕೆಶಿ ಪಟ್ಟನ್ನು ಅಲ್ಲಗಳೆಯುವಂತಿಲ್ಲ. ಇದೀಗ ಈ ಕಗ್ಗಂಟ್ಟನ್ನು ಕಾಂಗ್ರೆಸ್​ ಹೈಕಮಾಂಡ್​ ಹೇಗೆ ಬಗೆಹರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

    ನಿನ್ನೆ (ಮೇ 13) ಹೊರಬಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್​ 135 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 66 ಸ್ಥಾನಗಳನ್ನು ಗಳಿಸಿದರೆ, ಜೆಡಿಎಸ್​ ಕೇವಲ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. (ದಿಗ್ವಿಜಯ ನ್ಯೂಸ್​)

    ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಎಸ್​.ಟಿ. ಸೋಮಶೇಖರ್​ ನೀಡಿದ ಕಾರಣಗಳಿವು…

    ಬಿಜೆಪಿ ಸೋಲು, ಕ್ಷೇತ್ರಾವಾರು ಆತ್ಮಾವಲೋಕನಕ್ಕೆ ತೀರ್ಮಾನ: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ

    ಕಣ್ಣಿಗೊಂದು ಸವಾಲ್​: ಕೇವಲ 5 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಹುಲಿ ಪತ್ತೆಹಚ್ಚುವಿರಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts