25.5 C
Bangalore
Monday, December 16, 2019

ಸಂಸದ ಡಿ.ಕೆ.ಸುರೇಶ್​ಗೆ ತಲೆನೋವಾದ ಬೆಂಬಲಿಗರ ನಡೆ: ಬೇಡವೆಂದರೂ ಸ್ವಾಮಿ ಕಾರ್ಯ, ಸ್ವಕಾರ್ಯ ಎನ್ನುತ್ತಿರುವ ಕೈ ಕಾರ್ಯಕರ್ತರು!

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ರಾಮನಗರ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು​ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಇತ್ತ ಡಿಕೆಶಿ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್​ಗೆ ತಮ್ಮ ಕಾರ್ಯಕರ್ತರ ನಡೆ ತಲೆನೋವಾಗಿ ಪರಿಣಮಿಸಿದೆ ಎಂದು ಹೇಳಲಾಗಿದೆ.

- Advertisement -

ದೆಹಲಿಗೆ ಯಾರು ಬರಬೇಡಿ ಎಂದು ಮನವಿ ಮಾಡಿಕೊಂಡರು ಡಿಕೆಶಿ ನೋಡಲು ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿಯಿಂದ ಕೈ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಗರು ರಾಷ್ಟ್ರ ರಾಜಧಾನಿಯತ್ತ ಮುಖಮಾಡಿರುವುದೇ ಡಿ.ಕೆ. ಸುರೇಶ್​ಗೆ ಸಮಸ್ಯೆಯಾಗಿದೆ ಎನ್ನಲಾಗಿದೆ.

ಇಲ್ಲಿರಬೇಡಿ ವಾಪಸ್​ ಜಿಲ್ಲೆಗೆ ಹೋಗಿ, ಇಲ್ಲಿದ್ದು ಗಲಾಟೆ ಮಾಡಿದರೆ ಮತ್ತೆ ನಮಗೆ ತೊಂದರೆ ಆಗುತ್ತದೆ ಎಂದು ಹೇಳಿದರೂ ಡಿಕೆಶಿ ಬೆಂಬಲಿಗರು ಮಾತ್ರ ಸ್ವಾಮಿ ಕಾರ್ಯ, ಸ್ವಕಾರ್ಯ ಎನ್ನುತ್ತಿದ್ದಾರೆ. ಡಿಕೆಶಿ ನೋಡುವ ನೆಪದಲ್ಲಿ ದೆಹಲಿಯಲ್ಲಿದ್ದುಕೊಂಡು ಟೂರ್ ಮಾಡುತ್ತಿದ್ದಾರೆ. 10 ದಿನಗಳಿಂದ ದೆಹಲಿಯಲ್ಲಿಯೇ 400 ಕ್ಕೂ ಹೆಚ್ಚು ಮಂದಿ ಬೀಡುಬಿಟ್ಟಿದ್ದಾರೆ. ಸ್ವತಃ ಡಿಕೆಶಿ ಹೇಳಿದರೂ ಕೂಡ ಜಿಲ್ಲೆಗೆ ಬೆಂಬಲಿಗರು ವಾಪಸ್ಸಾಗಿಲ್ಲ. ಬೆಂಬಲಿಗರ ನಡೆಯಿಂದ ಡಿ.ಕೆ.ಬ್ರದರ್ಸ್ ಕಂಗಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಕೆಶಿ ಇಡಿ ಕಸ್ಟಡಿ ಅಂತ್ಯ
ಇಂದು ಮಾಜಿ ಸಚಿವ ಡಿಕೆಶಿ ಅವರ ಇಡಿ ಕಸ್ಟಡಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಕೋರ್ಟ್​ನಲ್ಲಿ ಡಿಕೆಶಿ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಯಲಿದೆ. ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆ ಬೆಂಬಲಿಗರು ಫುಲ್ ಡಲ್ ಆಗಿದ್ದು, ಡಿಕೆಶಿ ವಿರುದ್ಧ ತೀರ್ಪು ಬಂದರೆ ಜೋರು ಪ್ರತಿಭಟನೆಗಳು ನಡೆಯುತ್ತವೆ ಎನ್ನಲಾಗಿತ್ತು. ಆದರೆ, ಡಿ.ಕೆ.ಸುರೇಶ್ ತಮ್ಮ ಬೆಂಬಲಿಗರಿಗೆ ಫುಲ್ ಬ್ರೇಕ್ ಹಾಕಿದ್ದು, ಪ್ರತಿಭಟನೆ ಮಾಡಿದಷ್ಟು ನಮಗೆ ತೊಂದರೆ ಎಂಬ ಕಾರಣಕ್ಕೆ ಯಾವುದೇ ಕಾರಣಕ್ಕೂ ಪ್ರತಿಭಟನೆಗಳನ್ನು ಮಾಡದಿರಲು ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಪೊಲೀಸ್​ ವರಿಷ್ಠಾಧಿಕಾರಿ ಖಡಕ್ ವಾರ್ನಿಂಗ್
ಮತ್ತೊಂದೆಡೆ ರಾಮನಗರ ಎಸ್ಪಿ ಅನೂಪ್.ಎ.ಶೆಟ್ಟಿ ಕೂಡ ಖಡಕ್ ಎಚ್ಚರಿಕೆ ನೀಡಿದ್ದು, ಪ್ರತಿಭಟನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವ ರೀತಿಯ ತೀರ್ಪು ಬಂದರೂ ಪ್ರತಿಭಟನೆ ಮಾಡದಿರಲು ಡಿಕೆಶಿ ಬೆಂಬಲಿಗರು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. (ಏಜೆನ್ಸೀಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...