25.5 C
Bangalore
Monday, December 16, 2019

ಡಿಕೆಶಿ ಇ.ಡಿ ಕಸ್ಟಡಿ ವಿಸ್ತರಣೆ?: ಕೋರ್ಟ್​ಗೆ ಇಡಿ ಪರ ವಕೀಲರಿಂದ ಮನವಿ ಸಾಧ್ಯತೆ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

| ರಾಘವ ಶರ್ಮ ನಿಡ್ಲೆ ನವದೆಹಲಿ

- Advertisement -

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ 10 ದಿನಗಳ ಕಸ್ಟಡಿ ಪೂರ್ಣಗೊಳಿಸಿದ್ದು, ಶುಕ್ರವಾರ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಡಿಕೆಶಿ ಮಧ್ಯಾಹ್ನ 2 ಗಂಟೆಗೆ ಇ.ಡಿ. ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದು, ಇ.ಡಿ. ಅಧಿಕಾರಿಗಳು ಮತ್ತಷ್ಟು ದಿನ ಕಸ್ಟಡಿ ವಿಸ್ತರಣೆಗೆ ಮನವಿ ಮಾಡುವ ಸಾಧ್ಯತೆ ಇದೆ.

ದೆಹಲಿಯ ಸಫ್ದರ್ ಜಂಗ್ ನಿವಾಸದಲ್ಲಿ ಪತ್ತೆಯಾದ 8.5 ಕೋಟಿ ರೂ. ಹಣಕ್ಕೆ ಪ್ರಕರಣ ಸೀಮಿತವಾಗಿಲ್ಲ. ತನಿಖೆ ನಡೆಸಿದಷ್ಟೂ ಕೋಟಿಗಟ್ಟಲೆ ಅವ್ಯವಹಾರಗಳ ಮಾಹಿತಿಯನ್ನು ಇಡಿ ಅಧಿಕಾರಿಗಳು ಕಲೆ ಹಾಕಿರುವುದರಿಂದ ಹೆಚ್ಚುವರಿ ತನಿಖೆ ಸಲುವಾಗಿ ಶಿವಕುಮಾರ್​ರನ್ನು ಮತ್ತಷ್ಟು ದಿನಗಳ ಕಾಲ ತಮ್ಮ ವಶದಲ್ಲಿ ಇರಿಸಿಕೊಳ್ಳಲು ಅವಕಾಶ ಕೊಡುವಂತೆ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರಲ್ಲಿ ಮನವಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಳೆದ ವಿಚಾರಣೆ ವೇಳೆ 14 ದಿನಗಳ ಕಸ್ಟಡಿಗೆ ಕೋರಿದ್ದ ಇ.ಡಿ ಅಧಿಕಾರಿಗಳಿಗೆ 10 ದಿನಗಳ ಕಾಲಾವಕಾಶವನ್ನು ನ್ಯಾಯಾಧೀಶರು ನೀಡಿದ್ದರು. ಶುಕ್ರವಾರದ ವಿಚಾರಣೆ ವೇಳೆ ಪ್ರಕರಣದ ಆಳ-ಅಗಲದ ಬಗ್ಗೆ ಇ.ಡಿ ವಕೀಲರು ಮತ್ತಷ್ಟು ಮಾಹಿತಿಯನ್ನು ನ್ಯಾಯಾಲಯದಲ್ಲಿ ಹಂಚಿಕೊಳ್ಳಲಿದ್ದು, ಮತ್ತೆ 14 ದಿನಗಳ ಕಸ್ಟಡಿ ಕೇಳಿದರೂ ಅಚ್ಚರಿ ಇಲ್ಲ ಎಂದು ವಕೀಲರೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.

ಡಿಕೆಶಿಗೆ ಜಾಮೀನು ನೀಡುವಂತೆ ವಕೀಲ ಅಭಿಷೇಕ್ ಮನುಸಿಂಘಿ ಕಳೆದ ವಿಚಾರಣೆಯಲ್ಲೇ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರ ನೀಡುವಂತೆ ನ್ಯಾಯಾಲಯ ಇ.ಡಿ ವಕೀಲರಿಗೆ ತಿಳಿಸಿತ್ತು. ಶುಕ್ರವಾರದ ವಿಚಾರಣೆ ವೇಳೆ ಜಾಮೀನಿಗೆ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಧೀಶರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಡಿ ಆಕ್ಷೇಪಣೆ ಸಲ್ಲಿಸುವುದರ ಜತೆಗೆ ಜಾಮೀನು ಕುರಿತ ವಾದ-ಪ್ರತಿವಾದ ನಡೆಯುವ ಸಂಭವವಿದೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಆರೋಪಿಯ ವಿಚಾರಣೆ ಸಲುವಾಗಿ ಕೋರ್ಟ್ ಜಾಮೀನು ನೀಡುವುದು ಕಡಿಮೆ. ಹೀಗಾಗಿ, ಡಿಕೆಶಿ ಪ್ರಕರಣದಲ್ಲೂ ಇದೇ ಮುಂದುವರಿಯುವ ಲಕ್ಷಣಗಳಿವೆ.

ನಾವು ತಪ್ಪು ಮಾಡಿಲ್ಲ. ಜೈಲಿಗೆ ಹಾಕಿದರೂ ಹೆದರುವ ಪ್ರಶ್ನೆಯೇ ಇಲ್ಲ. ಡಿ.ಕೆ. ಶಿವಕುಮಾರ್ ತಮ್ಮ ಕಚೇರಿಯಲ್ಲಿ ಹೇಗೆ ಕೂರುತ್ತಾರೋ ಹಾಗೆಯೇ ಇಡಿ ಕಚೇರಿಯಲ್ಲೂ ಕೂರುತ್ತಾರೆ. ಮೊದಲು ಹೇಗಿದ್ದರೋ ಈಗಲೂ ಹಾಗೆಯೇ ಇದ್ದಾರೆ. ಮುಂದೆಯೂ ಅದೇ ಶಿವಕುಮಾರ್​ರನ್ನು ನೀವು ನೋಡುತ್ತೀರಿ.

| ಡಿ.ಕೆ. ಸುರೇಶ್ ಸಂಸದ

ಇಂದಿನ ಸಾಧ್ಯತೆಗಳೇನು

  • ಡಿಕೆಶಿ ಜಾಮೀನು ಅರ್ಜಿ ವಾದ-ಪ್ರತಿವಾದ
  • ಡಿಕೆಶಿ ಇಡಿ ಕಸ್ಟಡಿ ವಿಸ್ತರಣೆಗೆ ಇಡಿ ಮನವಿ
  • ಪ್ರಕರಣದಲ್ಲಿ ಇಡಿ ವ್ಯಾಪ್ತಿಗೆ ಬರದ ವಿಷಯಗಳ ಬಗ್ಗೆ ತನಿಖೆ ನಡೆಸಲು ಸಿಬಿಐ ಮುಂದಾಗಬಹುದು.
  • ಇಡಿ ಪರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗುವ ಸಾಧ್ಯತೆ

ಪುತ್ರಿ ಐಶ್ವರ್ಯಾ ವಿಚಾರಣೆ

108 ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ ಆರೋಪದಲ್ಲಿ ಡಿಕೆಶಿ ಪುತ್ರಿ ಐಶ್ವರ್ಯಾರನ್ನು ಇ.ಡಿ ಅಧಿಕಾರಿಗಳು ಶುಕ್ರವಾರ ವಿಚಾರಣೆ ನಡೆಸಿದ್ದಾರೆ. ಹಣದ ಮೂಲ, ಇದು ಎಲ್ಲಿಂದ ಬಂತು, ಇದು ತಂದೆಯವರಿಗೆ ಸೇರಿದ್ದರೆ ಅವರು ಈ ಹಣ ಸಂಪಾದಿಸಿದ್ದು ಹೇಗೆ ಇನ್ನಿತರ ಪ್ರಶ್ನೆಗಳನ್ನು ಇ.ಡಿ. ಅಧಿಕಾರಿಗಳು ಕೇಳಿದ್ದಾರೆ ಎನ್ನಲಾಗಿದೆ.

ಸೆ.11ರಂದು ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾಗೆ ಇಡಿ ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಬುಧವಾರವೇ ಅವರು ದೆಹಲಿಗೆ ಬಂದು ವಕೀಲರೊಂದಿಗೆ ಮಾತುಕತೆ ನಡೆಸಿದ್ದರು. ಗುರುವಾರ ಇ.ಡಿ ಪ್ರಧಾನ ಕಚೇರಿಗೆ 11 ಗಂಟೆಗೆ ಆಗಮಿಸಿದರಾದರೂ ಮಧ್ಯಾಹ್ನ 2.30ರ ತನಕ ಅಧಿಕಾರಿಗಳು ವಿಚಾರಣೆಗೆ ಕರೆದಿರಲಿಲ್ಲ. ಸಂಬಂಧಿಕರೊಂದಿಗೆ ಬಂದಿದ್ದ ಐಶ್ವರ್ಯಾ ಜೊತೆ 2.30ರ ತನಕ ಸಂಸದ ಡಿ.ಕೆ . ಸುರೇಶ್ ಇದ್ದರು. ಶುಕ್ರವಾರ ಮತ್ತೆ ವಿಚಾರಣೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಡಿಕೆಶಿ ಪುತ್ರಿಗೆ ಸೂಚನೆ ನೀಡಿದ್ದಾರೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...