More

    ಶಾಂತಿ, ಸುವ್ಯವಸ್ಥೆ ಕದಡುವ ಸಂಘಟನೆಗಳನ್ನು ನಿಷೇಧಿಸುತ್ತೇವೆ; ಕಾಂಗ್ರೆಸ್ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡ ಡಿಕೆಶಿ

    ಕೋಲಾರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ಬ್ಯಾನ್ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿರುವುದು ಸದ್ಯ ರಾಜ್ಯದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಬಿಜೆಪಿ ನಾಯಕರು ಸೇರಿದಂತೆ, ವಿವಿಧ ಹಿಂದೂಪರ ಸಂಘಟನೆಗಳ ನಾಯಕರು ಕಾಂಗ್ರೆಸ್​ ಪಕ್ಷವನ್ನು ಟೀಕಿಸುತ್ತಿದ್ದಾರೆ. ಇದೀಗ ಈ ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಳು ಮಾಡಿ ನೆಮ್ಮದಿ ಕದಡುವ ಸಂಘಟನೆಗಳನ್ನು ನಿಷೇಧ ಮಾಡುವ ಕುರಿತು ಹೇಳಿದ್ದೇವೆ ಎಂದು ಕೋಲಾರದಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಇದನ್ನೂ ಓದಿ: ಕುಟುಂಬವಾದಿ ಪಕ್ಷಗಳಿಂದ ಕರ್ನಾಟಕದ ಅಭಿವೃದ್ಧಿ ಸಾಧ್ಯವಿಲ್ಲ; ಜೆಡಿಎಸ್, ಕಾಂಗ್ರೆಸ್ ವಿರುದ್ಧ ಗುಡುಗಿದ ಮೋದಿ

    ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಏನಿತ್ತು?

    ಬಿಜೆಪಿ ಜಾರಿಗೆ ತಂದ ಎಲ್ಲಾ ಜನ ವಿರೋಧಿ ಕಾನೂನುಗಳು ಒಂದು ವರ್ಷದಲ್ಲಿ ರದ್ದುಗೊಳಿಸುವುದರ ಜೊತೆಗೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.

    ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿಎಫ್‍ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು.

    ಇದನ್ನೂ ಓದಿ: ಕಾಂಗ್ರೆಸ್ ನಾಯಕರ ನಿಂದನೆಗೆ ಜನರೇ ಉತ್ತರಿಸುತ್ತಾರೆ; ಖರ್ಗೆಗೆ ಟಾಂಗ್ ಕೊಟ್ಟ ಪ್ರಧಾನಿ ಮೋದಿ

    ದೇವರ ದಯೆಯಿಂದ ಬದುಕಿ ಬಂದಿದ್ದೇನೆ

    ಕೋಲಾರಕ್ಕೆ ಹೆಲಿಕಾಪ್ಟರ್​ನಲ್ಲಿ ಬರುತ್ತಿದ್ದಾಗ ಹದ್ದು ಡಿಕ್ಕಿಯಾಯಿತು. ದೇವರ ದಯೆ ಮತ್ತು ಜನರ ಪ್ರೀತಿಯಿಂದ ನಾನಿಂದು ಬದುಕಿ ಬಂದಿದ್ದೇನೆ. ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ. ಫೈಲಟ್ ಸಮಯ ಪ್ರಜ್ಞೆಯಿಂದ ಭೂ ಸ್ಪರ್ಶವಾಯಿತು ಎಂದು ಡಿಕೆಶಿ ಹೇಳಿಕೊಂಡಿದ್ದಾರೆ.

    ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಟೇಕಾಫ್ ಆಗುವ ವೇಳೆ ರಣಹದ್ದು ಡಿಕ್ಕಿಯಾಗಿದೆ. ಪರಿಣಾಮ ಹೆಲಿಕಾಪ್ಟರ್​ ವಿಂಡೋ ಗ್ಲಾಸ್​ ಪುಡಿಪುಡಿಯಾಗಿದೆ. ಕೂಡಲೇ ಪೈಲಟ್ ಹೆಲಿಕಾಪ್ಟರ್​ನ್ನು ಭೂಸ್ಪರ್ಶ ಮಾಡಿದ್ದು, ಭಾರೀ ಅನಾಹುತವೊಂದು ತಪ್ಪಿದೆ.

    ಇದನ್ನೂ ಓದಿ: ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ: ಹೊಸಪೇಟೆಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

    ಡಿ.ಕೆ.ಶಿವಕುಮಾರ್ ಎಚ್​ಎಎಲ್​ ವಿಮಾನ ನಿಲ್ದಾಣದಿಂದ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ತೆರಳಲು ನಿರ್ಧರಿಸಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ರಣಹದ್ದು ಡಿಕ್ಕಿಯಾಗಿ ಗಾಜು ಪುಡಿಯಾದ ಪರಿಣಾಮ ಹೆಲಿಕಾಪ್ಟರ್ ಪ್ರಯಾಣವನ್ನು ಡಿಕೆಶಿ ಮೊಟಕುಗೊಳಿಸಿದ್ದಾರೆ. ಕೊನೆಗೆ ರಸ್ತೆ ಮಾರ್ಗವಾಗಿ ತೆರಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts