Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಡಿ.ಕೆ ಶಿವಕುಮಾರ್​ ಅಪೊಲೋ ಆಸ್ಪತ್ರೆಗೆ ದಾಖಲು

Tuesday, 18.09.2018, 10:19 PM       No Comments

ಬೆಂಗಳೂರು: ತೀವ್ರ ವಾಂತಿ ಹಾಗೂ ಎದೆಯುರಿ ಸಮಸ್ಯೆಗೆ ಗುರಿಯಾಗಿರುವ ಸಚಿವ ಡಿ.ಕೆ ಶಿವಕುಮಾರ್​ ಅವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಫುಡ್​ ಪಾಯ್ಸನ್​ ( ಕೆಟ್ಟ ಆಹಾರ ಸೇವನೆ)ಯಿಂದಾಗಿ ಡಿ.ಕೆ.ಶಿವಕುಮಾರ್​ ಅವರಿಗೆ ಇಂದು ಬೆಳಗ್ಗೆ ಆರೋಗ್ಯದಲ್ಲಿ ಸಮಸ್ಯೆ ಎದುರಾಗಿತ್ತು. ತೀವ್ರ ವಾಂತಿ, ಭೇದಿ ಮತ್ತು ಎದೆಯುರಿಯಿಂದ ಬಳಲುತ್ತಿರುವುದಾಗಿ ಸಂಸದ ಡಿ.ಕೆ. ಸುರೇಶ್​ ಅವರು ಮಾಧ್ಯಮಗಳಿಗೆ ತಿಳಿಸಿದ್ದರು
ಬೆಳಗ್ಗಿನಿಂದಲೂ ಕನಕಪುರದ ತಮ್ಮ ನಿವಾಸದಲ್ಲೇ ಇದ್ದ ಡಿ.ಕೆ ಶಿವಕುಮಾರ್​, ಮಧ್ಯಾಹ್ನದ ಹೊತ್ತಿಗೆ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದರು. ಆದರೆ, ಆರೋಗ್ಯದಲ್ಲಿ ಮತ್ತಷ್ಟು ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ ಸೋದರ, ಸಂಸದ ಡಿ.ಕೆ ಸುರೇಶ್​, ಇಬ್ಬರು ವೈದ್ಯರು ನನ್ನ ಸೋದರನ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಇನ್ನಷ್ಟೇ ಚಿಂತಿಸುತ್ತಿರುವುದಾಗಿ ತಿಳಿಸಿದ್ದರು.
ಜಾರಿ ನಿರ್ದೇಶನಾಲಯದಿಂದ ಡಿ.ಕೆ ಶಿವಕುಮಾರ್​ ಅವರಿಗೆ ನೋಟಿಸ್​ ಬಂದಿದೆಯೇ ಎಂಬ ಪ್ರಶ್ನೆಗೆ ” ಅಂಥ ಯಾವುದೇ ನೋಟಿಸ್​ ನನ್ನ ಸೋದರನಿಗೆ ಬಂದಿಲ್ಲ,” ಎಂದು ಹೇಳಿದ್ದರು.

ಇದಾದ ಕೆಲವೇ ಹೊತ್ತಿನಲ್ಲಿ ಡಿಕೆಶಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Leave a Reply

Your email address will not be published. Required fields are marked *

Back To Top