More

    ಉಡುಪಿಯಲ್ಲಿ 176 ಕಡೆ ಡಿಕೆಶಿ ಪದಗ್ರಹಣ ಸಂಭ್ರಮ ವೀಕ್ಷಣೆ

    ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪದಗ್ರಹಣ ಪ್ರತಿಜ್ಞಾ ಕಾರ್ಯಕ್ರಮವನ್ನು ಜಿಲ್ಲೆಯ ಕಾಂಗ್ರೆಸ್ ಕಚೇರಿ, ಬ್ಲಾಕ್ ಕಚೇರಿ ಸೇರಿದಂತೆ ಸ್ಥಳೀಯ ನಾಯಕರ ಮನೆಗಳಲ್ಲಿ ಕಾಯಕರ್ತರು, ಪಕ್ಷದ ನಾಯಕರು ನೇರಪ್ರಸಾರದ ಮೂಲಕ ವೀಕ್ಷಣೆ ಮಾಡಿದರು.

    ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೃಹತ್ ಟಿವಿ ಪರದೆ ಅಳವಡಿಸಲಾಗಿತ್ತು. ನೂರಾರು ಕಾರ್ಯಕರ್ತರು, ಮುಖಂಡರು ಇಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಚೀನಾ ಗಡಿಯಲ್ಲಿ ಮೃತಪಟ್ಟ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿ ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಶಾಸಕ ಯು.ಆರ್.ಸಭಾಪತಿ, ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ, ಅಮೃತಾ ಕೃಷ್ಣಮೂರ್ತಿ ಆಚಾರ್ಯ, ದಿವಾಕರ ಶೆಟ್ಟಿ, ವೈ.ಸುಕುಮಾರ್, ಕಬೀರ್ ಸಾಹೇಬ್ ಮತ್ತಿತರರಿದ್ದರು.
    ಜಿಲ್ಲೆಯ ಕಾಂಗ್ರೆಸ್ ಪಕ್ಷದ 10 ಬ್ಲಾಕ್‌ಗಳಲ್ಲಿನ 176 ಕಡೆ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿತ್ತು.

    ಉಪ್ಪೂರು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉಪಸ್ಥಿತಿಯಲ್ಲಿ ಸ್ಥಳೀಯ ನಾಯಕರು, ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿದರು. ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಗುಲ್ವಾಡಿ, ಹಿರಿಯರಾದ ಕೃಷ್ಣಪ್ಪ ಪೂಜಾರಿ, ಸಂಜೀವ ಪೂಜಾರಿ, ಹೂವಯ್ಯ ಶೇರ್ವೆಗಾರ್, ತಾಲೂಕು ಪಂಚಾಯಿತಿ ಸದಸ್ಯ ದಿನಕರ ಹೆರೂರು ಇದ್ದರು. ನಗರದ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ನಗರಸಭೆ ಸದಸ್ಯ ರಮೇಶ್ ಕಾಂಚನ್ ನೇತೃತ್ವ ವಹಿಸಿದ್ದರು. ಸ್ಥಳೀಯ ಪ್ರಮುಖರಾದ ವಿಜಯ ಪೂಜಾರಿ, ಜ್ಯೋತಿ ಹೆಬ್ಬಾರ್, ವಿಘ್ನೇಶ್ ಕಿಣಿ, ಚಂದ್ರಿಕಾ ಶೆಟ್ಟಿ, ನರಸಿಂಹ ಮೂರ್ತಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts