23.2 C
Bangalore
Saturday, December 14, 2019

ಹಣೆಯಲ್ಲಿದ್ದರೆ ಹುದ್ದೆ ಸಿಗುತ್ತೆ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಬೆಂಗಳೂರು: ಹಣೆಬರಹದಲ್ಲಿ ಬರೆದಿದ್ದರೆ ಎಲ್ಲವೂ ಹುಡುಕಿಕೊಂಡು ಬರುತ್ತದೆ. ಅದರ ಮೇಲೆ ನನಗೆ ನಂಬಿಕೆ ಇದೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾವ ಸ್ಥಾನಕ್ಕೂ ಆಕಾಂಕ್ಷಿ ಅಲ್ಲ. ಯಾವುದೇ ಆತುರದಲ್ಲೂ ಇಲ್ಲ. ಮಾಧ್ಯಮಗಳು ಹೇಳುವಂತೆ ನಾನು ಎಲ್ಲಿಗೂ ಲಾಬಿ ಮಾಡಲು ಹೋಗಿಲ್ಲ. ಅದೆಲ್ಲ ಕಾಡಿಬೇಡಿ ಪಡೆಯುವಂತದ್ದೂ ಅಲ್ಲ ಎಂದರು. ಈಗ ಲಕ್ಷ್ಮಣ ಸವದಿ ಅವರನ್ನೇ ತಗೊಳ್ಳಿ. ಚುನಾವಣೆ ಗೆಲ್ಲದಿದ್ದರೂ ಅವರ ಹಣೆಯಲ್ಲಿ ಬರೆದಿತ್ತು, ಸಚಿವರೂ, ಉಪಮುಖ್ಯಮಂತ್ರಿಯೂ ಆಗಿದ್ದಾರೆ. ನಾನು ಅವರಿಗೆ ಅಭಿನಂದಿಸುತ್ತೇನೆ. ಹಾಗೇ ನಮ್ಮ ಹಣೆಯಲ್ಲಿ ಬರೆದಿದ್ದರೆ ಉನ್ನತ ಹುದ್ದೆ ಅಲಂಕರಿಸುತ್ತೇವೆ ಎಂದು ಹೇಳಿದರು.

ಬೇರೆಯವರು ನೀಡಿದ ಹೇಳಿಕೆಗಳಿಗೆ ಉತ್ತರ ಕೊಡಲಾಗಲ್ಲ. ನನಗೆ ಲಾಬಿ ಮಾಡುವ, ಬಯೋಡೆಟಾ ಕೊಡುವ ಅಗತ್ಯವಿಲ್ಲ. ಪಕ್ಷ ಹಾಗೂ ಗಾಂಧಿ ಕುಟುಂಬದ ಮೇಲೆ ನಂಬಿಕೆ ಇದೆ. ಅವರು ಏನೇ ಕೊಟ್ಟರು ಪ್ರಸಾದವೆಂದು ಸ್ವೀಕರಿಸುತ್ತೇನೆ. ಎಂದರು. ಪಕ್ಷದ ಹುದ್ದೆ ವಿಚಾರವಾಗಿ ಕೊಟ್ಟ ನನ್ನ ಹೇಳಿಕೆಯನ್ನು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿರುವುದಾಗಿ ತಿರುಚಿ ಗೊಂದಲ ಮೂಡಿಸಲಾಗಿದೆ. ನಮ್ಮ ಪಕ್ಷದ ನಾಯಕರಿಗೆ ಟಾಂಗ್ ಕೊಡುವ ಅಗತ್ಯ ನನಗಿಲ್ಲ. ನನಗೆ ಅಷ್ಟೂ ಸಾಮಾನ್ಯ ಪ್ರಜ್ಞೆ ಇಲ್ಲವೇ? ಎಂದು ಬೇಸರಿಸಿದರು.

ಬಾಂಬೆ ಸ್ನೇಹಿತರು ಯಾವಾಗ ಮಂತ್ರಿ ಆಗ್ತಾರೆ?

ನಮ್ಮ ಬಾಂಬೆ ಸ್ನೇಹಿತರಿಗಾಗಿ 17 ಖಾತೆಗಳು ಕಾಯ್ದುಕೊಂಡಿವೆ. ಹೀಗಾಗಿ ಅವರು ಮಂತ್ರಿಯಾಗುವುದನ್ನು ಟಿವಿಯಲ್ಲಿ ನೋಡಲು ಕಾಯುತ್ತಿದ್ದೇನೆ. ಅವರು ಯಾಕೆ ಕಣ್ಣೀರಿಡಬೇಕು? ಪಾಪ ಅವರೂ ಕಾಂಗ್ರೆಸ್ ಪಕ್ಷ ಕಟ್ಟಿದ್ದಾರೆ. ಪಕ್ಷದಿಂದ ಗೆದ್ದಿದ್ದಾರೆ. ಅದನ್ನು ಎತ್ತಿಕೊಂಡು ಹೋಗಿ ಬಿಜೆಪಿಯವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಹೋರಾಟ ಮಾಡಿ ಯಡಿಯೂರಪ್ಪ ಅವರಿಗೆ ಕಂಕಣ ಕಟ್ಟಿ ಸಿಎಂ ಮಾಡಿದ್ದಾರೆ. ಹೀಗಾಗಿ ಅದರ ಫಲ ಅನುಭವಿಸುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಅಣಕವಾಡಿದರು.

ಡಿಕೆಶಿಗೆ ಸಮನ್ಸ್ ಟೆನ್ಶನ್

ಬೆಂಗಳೂರು: ದೆಹಲಿಯ ಮನೆಗಳಲ್ಲಿ ದಾಖಲೆ ಇಲ್ಲದ 8.6 ಕೋಟಿ ರೂ. ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ಸಮನ್ಸ್ ರದ್ದು ಕೋರಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮತ್ತವರ ಆಪ್ತರು ಸಲ್ಲಿಸಿದ್ದ ಅರ್ಜಿಗಳ ಆದೇಶವನ್ನು ಹೈಕೋರ್ಟ್ ಗುರುವಾರ ಪ್ರಕಟಿಸುವ ಸಾಧ್ಯತೆಯಿದೆ. ಶಾಸಕ ಡಿಕೆಶಿ ಸೇರಿ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಈಗಾಗಲೇ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ, ಬುಧವಾರ ಆದೇಶದ ಉಕ್ತಲೇಖನ ನೀಡುವು ದಾಗಿ ತಿಳಿಸಿತ್ತು. ಅದರಂತೆ ಅರ್ಜಿದಾರರ ಪರ ವಕೀಲರು ಬುಧವಾರ ನ್ಯಾಯಪೀಠದ ಮುಂದೆ ಹಾಜರಾದರು. ಆಗ ನ್ಯಾಯಮೂರ್ತಿಗಳು, ಬೆಳಗ್ಗೆಯಿಂದಲೇ ಕಚೇರಿಯಲ್ಲಿ ಆದೇಶದ ಉಕ್ತಲೇಖನ ನೀಡಲಾಗುತ್ತಿದ್ದು, ಅದು ಅಪೂರ್ಣಗೊಂಡಿದೆ. ಗುರುವಾರದೊಳಗೆ ಉಕ್ತಲೇಖನ ಪೂರ್ಣ ಗೊಳ್ಳಬಹುದು. ಆದೇಶ ಸಿದ್ಧವಾದ ಕೂಡಲೇ ಪ್ರಕಟಿಸಲಾಗುವುದು ಎಂದರು. ಇದರಿಂದ ಗುರುವಾರ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಮೃದುಧೋರಣೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಈಗ ಇದ್ದಕ್ಕಿದ್ದಂತೆ ಜೆಡಿಎಸ್ ಬಗ್ಗೆ ಮೃದು ಧೋರಣೆ ತಾಳಿದ್ದಾರೆ. ನಮ್ಮ ಹೋರಾಟ ಏನಿದ್ದರೂ ಬಿಜೆಪಿ ವಿರುದ್ಧ ಮಾತ್ರ, ಜೆಡಿಎಸ್ ಸಹ ಕಾಂಗ್ರೆಸ್ ರೀತಿ ಜಾತ್ಯತೀತ ಪಕ್ಷವಾಗಿದೆ. ಇನ್ನೊಂದು ಜಾತ್ಯತೀತ ಪಕ್ಷವನ್ನು ವಿರೋಧಿಸು ವುದಿಲ್ಲವೆಂದು ಸರಣಿ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು. ಕಾಂಗ್ರೆಸ್ ಚುನಾವಣೆಗೆ ಸಿದ್ಧವಿದೆ ಎಂದಿದ್ದಾರೆ.

ಸಿ.ಟಿ.ರವಿ ವ್ಯಂಗ್ಯ

ಮಧ್ಯಂತರ ಚುನಾವಣೆಯ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದ್ದು, ಮೂಡನಂಬಿಕೆ ಪ್ರತಿಬಂಧಕ ಕಾಯ್ದೆ ಜಾರಿಗೆ ತರಲು ಹೊರಟಿದ್ದವರು ಭವಿಷ್ಯ-ಜಾತಕ ಹೇಳಲು ಯಾವಾಗ ಶುರು ಮಾಡಿದ್ದಾರೆ? ಎಂದಿದ್ದಾರೆ. ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬಂತೆ ಕಾಂಗ್ರೆಸ್​ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುವುದಾದರೆ ಮಾಡಲಿ. ಸಿದ್ದರಾಮಯ್ಯ ಕಾಂಗ್ರೆಸ್​ನಲ್ಲಿ ಪ್ರಶ್ನಾತೀತ ನಾಯಕ ಎಂದುಕೊಂಡಿದ್ದೆ. ಆದರೆ ಪ್ರತಿಪಕ್ಷ ನಾಯಕನ ಸ್ಥಾನ ಇನ್ನೂ ಘೊಷಣೆಯಾಗಿಲ್ಲ ಎಂದು ಟೀಕಿಸಿದ್ದಾರೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...