More

    ಬಿಜೆಪಿ-ಜೆಡಿಎಸ್​ ಮೈತ್ರಿ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಿಲ್ಲ: ಡಿ.ಕೆ. ಶಿವಕುಮಾರ್​

    ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿ ಅಥವಾ ಬಿಜೆಪಿ ಜೊತೆಗೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಎಂದು ತಲೆಕೆಡೆಸಿಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್​ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಅವರು ಈಗ ಹಿಂದೆ ಆಡಿದ್ದ ಮಾತು ಹಾಗೂ ಅವರ ಸಿದ್ದಾಂತ ಎಲ್ಲಿಗೆ ಹೋಯಿತು. ಅವರ ನಿಲುವುಗಳನ್ನು ನೀವು ಪ್ರಶ್ನಿಸಬೇಕು ಎಂದಿದ್ದಾರೆ.

    ಇದನ್ನೂ ಓದಿ: ದುರ್ಬಲ ಪಕ್ಷಗಳಿಗೆ ಮೈತ್ರಿ ಅನಿವಾರ್ಯ; ಜೆಡಿಎಸ್​-ಬಿಜೆಪಿ ಮೈತ್ರಿಗೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವ್ಯಂಗ್ಯ

    ಹಿಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂದು ಹೇಳಿದ್ದರು. ಆದರೆ, ಈಗ ನೋಡಿದರೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಹಿಂದೆ ಅವರು ಆಡಿದ್ದ ಮಾತುಗಳು ಹಾಗೂ ತತ್ವ-ಸಿದ್ದಾಂತ ಈಗ ಎಲ್ಲಿಗೆ ಹೋಯಿತು.

    ಅವರು ಏಕಾಂಗಿಯಾಗಿಯಾದರೂ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ ನಾವು ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಜೆಡಿಎಸ್​-ಬಿಜೆಪಿ ಮೈತ್ರಿಗೆ ನಮ್ಮ ಅಭ್ಯಂತರವಿಲ್ಲ. ಮುಂದಿನ ದಿನಗಳಲ್ಲಿ ಯಾವ ನಾಯಕರೂ ಪ್ರತಿಕ್ರಿಯೆ ನೋಡಬೇಕೋ ಅವರೇ ಮಾತನಾಡುತ್ತಾರೆ. ಅವರ ರಾಜಕೀಯ ಅಸ್ತಿತ್ವಕ್ಕಾಗ ಅವರು ತೀರ್ಮಾನ ಮಾಡಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಬಿಜೆಪಿ-ಜೆಡಿಎಸ್​ ಮೈತ್ರಿ ಕುರಿತು ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts