ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಭರ್ಜರಿ ಸಿದ್ದತೆ ಆರಂಭಿಸಿದ್ದು, ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕೆಲಸ ಆರಂಭಿಸಿವೆ. ಅದಕ್ಕೆ ಮುನ್ನುಡಿ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ. ಅದರಲ್ಲಿ ಅನುಮಾನ ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದರೆ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ಅವರ ಪುತ್ರ ಯತೀಂದ್ರ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಆಡಿರುವ ಮಾತು ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದೆ.
ಇದನ್ನೂ ಓದಿ: ಟ್ರೆಡಿಷನಲ್ ಡ್ರೆಸ್ನಲ್ಲಿ ಮಿಂಚಿದ ಗುಳಿಕೆನ್ನೆ ಚೆಲುವೆ; ನಿಮ್ಮ ನಗುವೇ ಸುಂದರ ಎಂದ ಫ್ಯಾನ್ಸ್
ನಮ್ಮ ಸರ್ಕಾರ ಬಲಿಷ್ಠವಾಗಿದೆ. ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನಮ್ಮ ರಾಜ್ಯದ ಮುಖ್ಯಮಂತ್ರಿ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇನೆ. ನಾವಿಬ್ಬರು ಸೇರಿ ಒಟ್ಟಿಗೆ ಚುನಾವಣೆ ಮಾಡುತ್ತೇವೆ.ಆದರೆ, ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತೆ, ಅದರಲ್ಲಿ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಆಸೆ ಪಡುವುದು, ಹೇಳೋದು, ಜನರಿಗೆ ಮನವಿ ಮಾಡುವುದು ಸಾಮಾನ್ಯ. ನಾನು ನನ್ನೂರಿಗೆ ಹೋದಾಗ ನನಗೆ ಶಕ್ತಿ ಕೊಡಿ ಎಂದು ಕೇಳುತ್ತೇನೆ. ಅದು ಸ್ವಾಭಾವಿಕ, ಬೇರೆ ರೀತಿ ಯಾಕೆ ಟ್ವಿಸ್ಟ್ ಮಾಡಬೇಕು. ಯತೀಂದ್ರ ಸೂಕ್ಷ್ಮ ವ್ಯಕ್ತಿ, ಉದ್ಬವ ಆಗುತ್ತಿರುವ ನಾಯಕ. ನಾವು ಅವರಿಗೆ ಸಹಕಾರ ಕೊಡೋಣ ಎಂದು ಹೇಳಿದ್ದಾರೆ.