More

    ಜಗದೀಶ್​ ಶೆಟ್ಟರ್​ ಘರ್​ವಾಪ್ಸಿ; ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ ಎಂದ ಡಿ.ಕೆ. ಶಿವಕುಮಾರ್

    ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಮಹತ್ವದ ಬೆಳವಣಿಗೆ ಒಂದರಲ್ಲಿ ಕಾಂಗ್ರೆಸ್​ ತೊರೆದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ಸೇರ್ಪಡೆಯಾಗಿದ್ದಾರೆ. ರಾಜ್ಯ ರಾಜಕೀಯ ವಲಯದಲ್ಲಿ ಈ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ.

    ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್​, ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ. ಬಿಜೆಪಿಗೆ ವಾಪಸ್ ಬರುವಂತೆ ನನ್ನ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಹೇಳಿದ್ದರು.

    ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಸೇರಿದ್ದಾರೆ ಎಂದು ತಿಳಿಯಿತು.

    ಇದನ್ನೂ ಓದಿ: ರೀಲ್ಸ್ ಮಾಡ್ತಾ ಫುಲ್‌ ಆ್ಯಕ್ಟೀವ್ ಇದ್ದ ಟೀಚರ್ ಕೊಲೆ ಪ್ರಕರಣ; ಹತ್ಯೆ ಹಿಂದಿನ ಕಾರಣ ಬಿಚ್ಚಿಟ್ಟ ಎಸ್​ಪಿ

    ಅವರು ಹಿರಿಯ ನಾಯಕರು ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಬಹಳ ಗೌರವದಿಂದ ನಡೆಸಿಕೊಂಡಿತ್ತು. ಇತ್ತೀಚೆಗೆ ರಾಮಮಂದಿರ ವಿಚಾರದಿಂದ ಹಿಡಿದು ಬೇರೆ, ಬೇರೆ ವಿಷಯಗಳ ಬಗ್ಗೆ ಶೆಟ್ಟರ್ ಅವರು ಬಿಜೆಪಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು. ನಾವು ಅವರ ಮೆಲೆ ಇಟ್ಟಿದ್ದ ವಿಶ್ವಾಸಕ್ಕೆ ಧಕ್ಕೆಯಾಗಿದೆ ಎಂದು ಮಾಧ್ಯಮಗಳೇ ವಿಶ್ಲೇಷಣೆ ಮಾಡುತ್ತಿವೆ.

    ವಿಧಾನ ಪರಿಷತ್ ಸಭಾಪತಿಗೆ ಅವರು ಕರೆ ಮಾಡಿ ಫ್ಯಾಕ್ಸ್ ಮೂಲಕ ರಾಜೀನಾಮೆ ಕಳುಹಿಸಿಕೊಡುವುದಾಗಿ ಹೇಳಿದ್ದಾರೆ. ಅವರನ್ನು ಬಲವಂತವಾಗಿ ಕರೆದುಕೊಂಡು ಹೋಗಲಾಗಿದೆಯೋ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ನೋಡಿ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts