16 C
Bangalore
Thursday, December 12, 2019

ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಇ.ಡಿ.ನ್ಯಾಯಾಲಯ; ಡಿ.ಕೆ.ಶಿವಕುಮಾರ್​ ನ್ಯಾಯಾಂಗ ಬಂಧನಕ್ಕೆ

Latest News

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ನವದೆಹಲಿ: ದೆಹಲಿಯ ನಿವಾಸದಲ್ಲಿ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಇ.ಡಿ.ನ್ಯಾಯಾಲಯ ಅವರನ್ನು ನಾಳೆಯವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಜಾಮೀನು  ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದು, ಡಿ.ಕೆ.ಶಿವಕುಮಾರ್​ ಅವರು ತಿಹಾರ್ ಜೈಲಿಗೆ ಹೋಗುವುದು ಅನಿವಾರ್ಯವಾಗಿದೆ. ಆದರೆ ಅವರ ಆರೋಗ್ಯ ಹದಗೆಟ್ಟಿರುವುದರಿಂದ ಆಸ್ಪತ್ರೆಗೆ ತೆರಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ನ್ಯಾಯಮೂರ್ತಿ ಅಜಯ್ ಕುಮಾರ್ ಕುಹರ್ ನೇತೃತ್ವದ ಪೀಠದ ಮುಂದೆ ಡಿ ಕೆ ಶಿವಕುಮಾರ್‌ ಪರ ಹಿರಿಯ ವಕೀಲ ಅಭಿಷೇಕ್​ ಮನುಸಿಂಘ್ವಿ ವಾದ ಮಂಡಿಸಿದರೆ, ಅಡಿಷನಲ್ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಇ.ಡಿ. ಪರ ವಾದ ಮಂಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ಸೂಟ್‌ಕೇಸ್‌ನಲ್ಲಿ ತೆಗೆದುಕೊಂಡು ನ್ಯಾಯಾಲಯಕ್ಕೆ ಬಂದರು. ಇ.ಡಿ. ಕೋರ್ಟ್ ಹಾಲ್ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ
ಒಂದೆಡೆ ಡಿಕೆ ಶಿವಕುಮಾರ್​ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಸೆ.14ರಂದು ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದರಿಂದಾಗಿ ಅವರನ್ನು ದೆಹಲಿಯಲ್ಲಿ ರಾಮ್‌ ಮನೋಹರ್‌ ಲೋಹಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ನೇರವಾಗಿ ಡಿಕೆಶಿಯವರನ್ನು ಇ.ಡಿ. ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

ಅಕ್ರಮ ಹಣ ಪತ್ತೆ ಹಿನ್ನೆಲೆಯಲ್ಲಿ ಬಂಧನದ ನಂತರ ವಿಚಾರಣೆಗೆಂದು 10 ದಿನ ಕಾಲ ಡಿಕೆಶಿ ಅವರನ್ನು ಇ.ಡಿ. ಅಧಿಕಾರಿಗಳ ವಶಕ್ಕೆ ನ್ಯಾಯಾಲಯ ನೀಡಿತ್ತು. ಅದಾದ ಬಳಿಕ ಇನ್ನೂ 4 ದಿನ ಇಡಿ ಕಸ್ಟಡಿಗೆ ನೀಡಬೇಕು ಎಂದು ಜಾರಿ ನಿರ್ದೇಶನಾಲಯದ ವಕೀಲರು ನ್ಯಾಯಾಲಯದ ಎದುರು ಮನವಿ ಮಾಡಿದ್ದರು. ಇದಕ್ಕೆ ಒಪ್ಪಿದ್ದ ನ್ಯಾಯಾಲಯ ಸೆ. 13ರಂದು ಮತ್ತೆ ನಾಲ್ಕು ದಿನ ಅಂದರೆ ಸೆಪ್ಟೆಂಬರ್‌ 17ರವರೆಗೆ ನ್ಯಾಯಾಲಯ ಇ.ಡಿ. ಕಸ್ಟಡಿಗೆ ನೀಡಿ ಆದೇಶಿಸಿತ್ತು.

ಆರೋಗ್ಯ ಹದಗೆಟ್ಟಿದ್ದರಿಂದಾಗಿ ಇ.ಡಿ. ಕಸ್ಟಡಿಯಲ್ಲೇ ಡಿಕೆಶಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ತನಿಖಾಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಅಲ್ಲದೆ, ಮೊದಲು ಡಿಕೆಶಿ ಆರೋಗ್ಯಕ್ಕೆ ಆದ್ಯತೆ ನೀಡಿ, ಅನಂತರ ನಿಮ್ಮ ವಿಚಾರಣೆ ನಡೆಸಿ ಎಂದು ಕೋರ್ಟ್​ ತಿಳಿಸಿ, ಜಾಮೀನು ಕುರಿತಾದ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ಇ.ಡಿ.ಯಿಂದ ಬಂಧನವಾದಂದಿನಿಂದಲೂ ಡಿಕೆಶಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವಿಚಾರಣೆಯಿಂದ ಕೊಂಚ ದೂರವೇ ಉಳಿದಿರುವುದರಿಂದಾಗಿ ಹೆಚ್ಚಿನ ವಿಚಾರಣೆಗೆ ಅಗತ್ಯವಿದೆ ಎಂದು ಇ.ಡಿ. ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಪುತ್ರಿ ಐಶ್ವರ್ಯಾಗೂ ತಟ್ಟಿದ ಬಿಸಿ
108 ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ ಆರೋಪದಲ್ಲಿ ಸೆ.12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಇ.ಡಿ. ಅಧಿಕಾರಿಗಳು ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಮನ್ಸ್ ಜಾರಿ ಮಾಡಿದ್ದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆಯ ಬಾಗಿಲಿಗೆ ನೋಟಿಸ್ ಪ್ರತಿ ಅಂಟಿಸಿದ್ದರು. ಅದರಂತೆ ಇ.ಡಿ ಅಧಿಕಾರಿಗಳು ಬುಧವಾರ(ಸೆ.11) ವಿಚಾರಣೆ ನಡೆಸಿ ಹಣದ ಮೂಲ, ಇದು ತಂದೆಯವರಿಗೆ ಸೇರಿದ್ದರೆ ಅವರು ಈ ಹಣ ಸಂಪಾದಿಸಿದ್ದು ಹೇಗೆ ಇನ್ನಿತರ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿತ್ತು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...