More

    ರೇವಣ್ಣ ಸ್ಥಿತಿ ನೋಡಿ ಡಿಕೆಶಿ ಮರುಕ

    ಬೆಂಗಳೂರು: ಎಚ್.ಡಿ.ರೇವಣ್ಣ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮರುಕ ವ್ಯಕ್ತಪಡಿಸಿದ್ದಾರೆ.
    ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ ಎಂದರು.
    ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ಹೇಳಿದರು.
    ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts