More

    ಉಚಿತ ಲಸಿಕೆ ನಮ್ಮ ಹೋರಾಟದ ಫಲ : ಕಾಂಗ್ರೆಸ್​ ಮುಖಂಡ ಡಿಕೆಶಿ

    ಬೆಂಗಳೂರು : “ನಾವು ಹೋರಾಟ ಮಾಡಿದ್ದರಿಂದ ಕೇಂದ್ರ ಸರ್ಕಾರ ದೇಶದಾದ್ಯಂತ ಇಂದು ಉಚಿತ ಲಸಿಕೆ ಘೋಷಿಸಿದೆ. ಎಲ್ಲ ರಾಜ್ಯಗಳಲ್ಲಿ ನಮ್ಮ ಪಕ್ಷದವರು ರಾಜ್ಯಪಾಲರನ್ನು ಭೇಟಿ ಮಾಡಿ, ಉಚಿತ ಲಸಿಕೆಗೆ ಆಗ್ರಹಿಸಿದ್ದರು” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಡಿಕೆಶಿ, ಜೂನ್​ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರಿ ಕೇಂದ್ರಗಳಲ್ಲಿ ಕರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಯ ಬಗ್ಗೆ ಉಲ್ಲೇಖಿಸಿ ಈ ಮಾತು ಹೇಳಿದರು.

    ಇದನ್ನೂ ಓದಿ: ಬಿಜೆಪಿ ಸರ್ಕಾರದ ಪೆಟ್ರೋಲ್ ಪಿಕ್ ಪಾಕೆಟ್ ಖಂಡಿಸಿ ‘100 ನಾಟೌಟ್’ ಆಂದೋಲನ : ಡಿಕೆಶಿ

    “ನಾವು ನಮ್ಮ ಶಾಸಕರ ನಿಧಿಯಿಂದ ಲಸಿಕೆ ನೀಡಲು ಅನುಮತಿ ಕೋರಿದ್ದೆವು. ಆದರೆ ಸರ್ಕಾರ ಅದನ್ನು ನಿರಾಕರಿಸಿದ್ದು, ಜನರ ಜೀವ ರಕ್ಷಿಸಲು ನಿರಾಕರಿಸಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರದಷ್ಟೇ ರಾಜ್ಯ ಸರ್ಕಾರ ಕೂಡ ವಿಫಲವಾಗಿದೆ. ಸುಪ್ರೀಂಕೋರ್ಟ್ ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ. ಮಾಧ್ಯಮಗಳು ಜನರ ಪರವಾಗಿ ನಿಂತಿದ್ದು, ನ್ಯಾಯಾಲಯದ ಜೊತೆ ಮಾಧ್ಯಮಗಳಿಗೂ ಅಭಿನಂದನೆ ತಿಳಿಸುತ್ತೇನೆ” ಎಂದು ಡಿಕೆಶಿ ಹೇಳಿದರು.

    ಕರೊನಾ ನಿಯಮ ಉಲ್ಲಂಘಿಸಿ ಬರ್ತ್​ಡೇ! ಪೊಲೀಸ್ ಅಧಿಕಾರಿ ಸಸ್ಪೆಂಡ್​!

    ಫಿಟ್​ನೆಸ್​ ಬಯಸುವವರಿಗೆ ಮಲೈಕಾ ಸಲಹೆ – ನೌಕಾಸನ !

    ಬಾಲಕಿಗೆ ಕಿರುಕಳ ನೀಡಬೇಡ ಎಂದವನನ್ನು ಇರಿದು ಕೊಂದ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts